ವಿವಾಹ ಪ್ರಮಾಣಪತ್ರ ನೀಡಲು ವಕ್ಫ್ ಮಂಡಳಿಗೆ ಅಧಿಕಾರ ನೀಡಿದ್ದ ಸರಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

Update: 2024-11-22 09:27 GMT

ಬೆಂಗಳೂರು : ರಾಜ್ಯದಲ್ಲಿ ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣಪತ್ರ ನೀಡಲು ರಾಜ್ಯ ವಕ್ಫ್ ಮಂಡಳಿಗೆ ರಾಜ್ಯ ಸರಕಾರ ನೀಡಿದ್ದ ಅಧಿಕಾರಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಂಗಳೂರಿನ ಆಲಂ ಪಾಷಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠ ತಡೆಯಾಜ್ಞೆ ನೀಡಿ ಆದೇಶಿಸಿದೆ.

ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಣೆ ಅಧಿಕಾರವನ್ನು ರಾಜ್ಯ ವಕ್ಫ್ ಮಂಡಳಿಗೆ ನೀಡಿ ರಾಜ್ಯ ಸರಕಾರ ಅಲ್ಪಸಂಖ್ಯಾತ, ವಕ್ಫ್ ಮತ್ತು ಹಜ್ ಇಲಾಖೆ 2023ರ ಸೆಪ್ಟೆಂಬರ್ 30ರಂದು ಹೊರಡಿಸಿದ್ದ ಅದೇಶಕ್ಕೆ ಜ.7ರವರೆಗೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿತು.

ನ್ಯಾಯಾಲಯದ ಮುಂದಿನ ಆದೇಶದವರೆಗೆ ಸರಕಾರ ತನ್ನ ಆದೇಶ ಅಮಾನತ್ತಿನಲ್ಲಿಡಬೇಕು. ವಕ್ಫ್ ಮಂಡಳಿ ಯಾವುದೇ ವಿವಾಹ ನೋಂದಣಿ ಪ್ರಮಾಣಪತ್ರಗಳನ್ನು ವಿತರಿಸಬಾರದು. ಯಾವುದೇ ಅಧಿಕಾರ ಇಲ್ಲದೆ ವಕ್ಫ್ ಮಂಡಳಿ ಆ ರೀತಿ ಮದುವೆ ಪ್ರಮಾಣಪತ್ರ ವಿತರಣೆ ಮಾಡುವುದನ್ನು ಒಪ್ಪಲಾಗದು ಎಂದು ಹೇಳಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು 2025ರ ಜ.7ಕ್ಕೆ ನಿಗದಿಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News