ಬಿಜೆಪಿ ಪಾದಯಾತ್ರೆಗೆ ಅನುಮತಿ, ಭದ್ರತೆ‌ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಮೌಖಿಕ ಸೂಚನೆ

Update: 2024-08-02 17:20 GMT

ಬೆಂಗಳೂರು: ಕೆಂಗೇರಿಯಿಂದ ಮೈಸೂರುವರೆಗೆ ಪಾದಯಾತ್ರೆ ಕೈಗೊಳ್ಳಲು ಅನುಮತಿ ನೀಡುವಂತೆ ಕೋರಿ ಬಿಜೆಪಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸುವಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಹೈಕೋರ್ಟ್ ಮೌಖಿಕ ಆದೇಶ ನೀಡಿದೆ.

ಅನುಮತಿ ನೀಡಿಲ್ಲವೆಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಹಾಜರಾಗಿ ವಿಷಯ ಪ್ರಸ್ತಾಪಿಸಿದರು. ಅರ್ಜಿದಾರ ವಾದ ಆಲಿಸಿದ ಪೀಠ ಇದಕ್ಕೆ ಸ್ಪಂದಿಸಿದ್ದು, ಕೆಂಗೇರಿಯಿಂದ ಮೈಸೂರುವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲು ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಪರಿಗಣಿಸಿ ಸೂಕ್ತ ಆದೇಶ ಹೊರಡಿಸಬೇಕು. ಕಾನೂನು ರೀತಿ ಸೂಕ್ತ ಪೊಲೀಸ್ ಭದ್ರತೆ ಒದಗಿಸಬೇಕು ಎಂದು ಮೌಖಿಕ ಆದೇಶ ನೀಡಿ, ವಿಚಾರಣೆಯನ್ನು ಆಗಸ್ಟ್‌ 14ಕ್ಕೆ ಮುಂದೂಡಿತು.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News