ಹೆಚ್ಎಂಪಿವಿ ವೈರಸ್ | ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

Update: 2025-01-06 09:13 GMT

ಬೆಂಗಳೂರು, ಜನವರಿ 6 : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News