ರಾಷ್ಟ್ರ ಧ್ವಜ ಹಾರಿಸುವ ಬದಲು ಕೇಸರಿ ಧ್ವಜ ಹಾರಿಸಿದ್ದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ
ಚಿತ್ರದುರ್ಗ: ರಾಷ್ಟ್ರ ಧ್ವಜ ಹಾರಿಸುವ ಬದಲು ಕೇಸರಿ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮಮದಲ್ಲಿ ಪೊಲೀಸರು ಕೇಸರಿ ಧ್ವಜ ಇಳಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದರು.
ಧ್ಚಜ ಸ್ಥಂಭದಲ್ಲಿ ರಾಷ್ಟ್ರ ಧ್ಬಜ ಹಾಗೂ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತು. ಆದರೆ, ರಾಷ್ಟ್ರ ಧ್ಬಜ ಹಾರಿಸುವ ಬದಲು ಕೇಸರಿ ಧ್ವಜ ಹಾರಿಸಿದ್ದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದರು.
ಶ್ಯಾಮನೂರು ಶಿವಶಂಕರಪ್ಪನವರು ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಅವರೇ ಗೆಲ್ಲಲಿ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನನಗೆ ಗೊತ್ತಿಲ್ಲ, ಅವರೊಂದಿಗೆ ಮಾತನಾಡುತ್ತೇನೆ ಎಂದರು.
ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ
ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವನ್ನು ವ್ಯಕ್ತಪಡಿಸಿದರು. ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ ಎಂದರು.
ಜಾತಿವಾರು ಜನಗಣತಿ ವರದಿಯನ್ನು ಸಲ್ಲಿಸಿದರೆ ವರದಿಯನ್ನು ಸ್ವೀಕಾರ ಮಾಡುವುದಾಗಿ ತಿಳಿಸಿದರು. ವರದಿಯಲ್ಲಿ ಏನಿದೆ ಎಂದು ಸಲ್ಲಿಕೆಯಾದ ಮೇಲೆ ಚರ್ಚೆ ಮಾಡುವುದಾಗಿ ತಿಳಿಸಿದರು.