ಮನೆ ಮೇಲೆ ದಾಳಿ; ಜಿಂಕೆ, ಕಾಡುಕೋಣದ ಕೊಂಬು ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು
ಶಿವಮೊಗ್ಗ, ನ.1: ರಾಜ್ಯಾದ್ಯಂತ ಹುಲಿ ಉಗುರಿನ ಪ್ರಕರಣಗಳ ಬೆನ್ನಲ್ಲೇ ಇದೀಗ ವನ್ಯಜೀವಿ ಉಪ ಸಂರಕ್ಷಣಾ ಅಧಿಕಾರಿಗಳ ತಂಡ ಮತ್ತು ಅರಣ್ಯ ಜಾಗೃತ ದಳ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆ ಸಮೀಪದ ಬಸವನಗದ್ದೆಯಲ್ಲಿ ಜಂಟಿ ಕಾರ್ಯಾಚರಣೆ ಮಾಡಿ, ಕಾಡು ಪ್ರಾಣಿಗಳ ಕೊಂಬನ್ನು ವಶಕ್ಕೆ ಪಡೆದಿದ್ದಾರೆ.
ಹಣಗೆರೆ ಸಮೀಪದ ಬಸವನಗದ್ದೆಯ ಪ್ರಸನ್ನ ಎಂಬುವವರ ಮನೆಗೆ 12 ಜನ ಅಧಿಕಾರಿಗಳ ತಂಡವು ದಾಳಿ ಮಾಡಿ, ಮನೆಯಲ್ಲಿದ್ದ ಜಿಂಕೆ ಮತ್ತು ಕಾಡುಕೋಣದ ಕೊಂಬನ್ನು ವಶಕ್ಕೆ ಪಡೆದಿದ್ದಾರೆ.
ಆರಗ ಜ್ಞಾನೇಂದ್ರ ಪ್ರತಿಭಟನೆ:
ನೂರಾರು ವರ್ಷಗಳಿಂದ ಈ ಮನೆಯಲ್ಲಿ ವನ್ಯಜೀವಿಯ ಟ್ರೋಫಿಯೊಂದು ಇದ್ದು, ಇದೀಗ ಅದನ್ನು ಜಪ್ತಿ ಮಾಡಿದ್ದಾರೆ. ಇನ್ನು ಮನೆ ಯಜಮಾನ ವಯಸ್ಸಾಗಿ ಅನಾರೋಗ್ಯದಲ್ಲಿದಲಿದ್ದಾರೆ. ಆದರೂ ಅರಣ್ಯ ಅಧಿಕಾರಿಗಳು ಆತನನ್ನು ಬಂಧಿಸಲು ಮುಂದಾಗಿದ್ದು, ಅರಣ್ಯ ಅಧಿಕಾರಿಗಳ ಧೋರಣೆಗೆ ಶಾಸಕ ಆರಗ ಜ್ಞಾನೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಅರಣ್ಯಾಧಿಕಾರಿಗಳ ಈ ದಿಢೀರ್ ಕ್ರಮವನ್ನು ಖಂಡಿಸಿ ಮಾಜಿ ಸಚಿವ ಆರಗ ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.