ಬಿಜೆಪಿ ಸರಕಾರದ ಅವಧಿಯ ಅಕ್ರಮ | ವಾರದೊಳಗೆ ಸಮಿತಿ ಸಭೆ : ಗೃಹ ಸಚಿವ ಜಿ.ಪರಮೇಶ್ವರ್‌

Update: 2024-09-11 07:38 GMT

ಬೆಂಗಳೂರು: "ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ವಿವಿಧ ಹಗರಣಗಳು ತನಿಖಾ ಸಂಸ್ಥೆಗಳ ಹಂತದಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ"ಎಂದು ಸಮಿತಿಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼಎಲ್ಲ ಹಗರಣಗಳ ಪ್ರಕರಣಗಳನ್ನು ಗುರುತಿಸಿದ್ದೇವೆ.‌ ಅವುಗಳ ತನಿಖೆ ಯಾವ ಹಂತದಲ್ಲಿವೆ ಎಂಬುದನ್ನು ಪರಿಶೀಲಿಸಿ, ವರದಿಯನ್ನು ಸಚಿವ ಸಂಪುಟಕ್ಕೆ ಸಲ್ಲಿಸುತ್ತೇವೆʼ ಎಂದರು.

ತ್ವರಿತಗತಿಯಲ್ಲಿ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಸಮಿತಿ ರಚನೆ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಪ್ರಗತಿ ಪರಿಶೀಲನೆ ವೇಳೆ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರ ಕ್ಯಾಬಿನೆಟ್ ಗಮನಕ್ಕೆ ಬಂದ ಬಳಿಕ ತ್ವರಿತಗತಿಯಲ್ಲಿ ಮಾಡಲು ಸಮಿತಿ ರಚಿಸಿದ್ದಾರೆ‌ ಎಂದು ಹೇಳಿದರು.

ದ್ವೇಷದ ರಾಜಕಾರಣ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿ, ಅವರು ಏನಾದರು ಹೇಳಿಕೊಳ್ಳಲಿ. ನಮ್ಮನ್ನು ಟೀಕೆ ಮಾಡುವುದಕ್ಕೆ,‌ ಸಲಹೆ‌ ನೀಡಲು, ತಪ್ಪು ಮಾಡಿದಾಗ ಹೇಳುವುದಕ್ಕೆ ಅವರಿಗೆ ಜವಾಬ್ಧಾರಿಗಳಿರುತ್ತವೆ. ಆಡಳಿತ ನಡೆಸುವರಿಗೂ ಅವರಿಗೆ ಆದಂತಹ ಜವಾಬ್ದಾರಿಗಳಿರುತ್ತವೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News