ಶರಣಾಗತರಾಗಿರುವ ಆರು ಜನರು ಕೊನೆಯ ನಕ್ಸಲರು : ಗೃಹ ಸಚಿವ ಜಿ.ಪರಮೇಶ್ವರ್‌

Update: 2025-01-10 07:05 GMT

ಜಿ.ಪರಮೇಶ್ವರ್‌

ಬೆಂಗಳೂರು : ʼಶರಣಾಗತರಾದ ನಕ್ಸಲರು ಶಸ್ತ್ರಾಸ್ತ್ರಗಳನ್ನು ಕಾಡಿನಲ್ಲಿ ಎಲ್ಲಿ ಬಿಸಾಕಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಹಚ್ಚಲಿದ್ದಾರೆʼ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಹೇಳಿದರು.

ನಕ್ಸಲರ ಶಸ್ತ್ರಾಸ್ತ್ರ ದ ಕುರಿತ ಮಾಧ್ಯಮದವರ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ʼಕಾಡಿನಲ್ಲಿ ಎಲ್ಲಿ ಇಟ್ಟಿದ್ದಾರೆ ಎಂಬುದನ್ನು ಪೊಲೀಸರು ಹುಡುಕುತ್ತಾರೆ. ನಾವು ಮಾಡುವ ಕೆಲಸ ಮಾಡುತ್ತೇವೆ. ಇದಕ್ಕೆಲ್ಲ ಪ್ರಕ್ರಿಯೆ ಇದೆ. ಅದರ ಅನುಸಾರ ಪೊಲೀಸರು ಕೆಲಸ‌ ಮಾಡುತ್ತಾರೆ. ಇದೆಲ್ಲ ಬಿಜೆಪಿಯವರಿಗೆ ಗೊತ್ತಿಲ್ಲವೇ? ಅವರು ಕೂಡ ಸರಕಾರ ನಡೆಸಿದ್ದಾರೆ. ಆಗಲೂ ಇದೇ ಪೊಲೀಸ್ ಇಲಾಖೆ ಇತ್ತಲ್ಲವೇ?ʼ ಎಂದರು.

ನಕ್ಸಲ್ ರವೀಂದ್ರ ಎಂಬಾತ ನಾಪತ್ತೆ ಬಗ್ಗೆ ಪ್ರತಿಕ್ರಿಯಿಸಿ, ʼಶರಣಾಗತರಾಗಿರುವ ಗುಂಪಿನವರು ಆತನನ್ನು ಹೊರ ಹಾಕಿದ್ದರು ಎನ್ನುವ ಮಾಹಿತಿ ಇದೆ. ಯಾವ ಕಾರಣಕ್ಕೆ ಹೊರಹಾಕಿದ್ದರು ಎಂಬುದು ಗೊತ್ತಿಲ್ಲ. ತನಿಖೆ ನಡೆದಿದೆ. ನಕ್ಸಲ್ ಚಟುವಟಿಕೆ ಬಗ್ಗೆ ನಮಗೆ ಈವರೆಗೆ ಸಿಕ್ಕಿರುವ ಮಾಹಿತಿ ಪ್ರಕಾರ, ಶರಣಾಗತರಾಗಿರುವ ಆರು ಜನರೇ ಕೊನೆ ಎಂಬುದಾಗಿದೆ. ಹೊರಗಡೆಯಿಂದ ಬಂದರೆ ನಿಗಾವಹಿಸಲಿದ್ದರೆʼ ಎಂದು ಹೇಳಿದರು.

ಎನ್‌ಕೌಂಟರ್‌ನಲ್ಲಿ‌ ಮೃತಪಟ್ಟ ನಕ್ಸಲ್ ವಿಕ್ರಮ್ ಗೌಡ ಅವರ ಕುಟುಂಬಕ್ಕೆ ಪರಿಹಾರ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸಲಿದ್ದಾರೆ. ನಕ್ಸಲರು ಶರಣಾಗತರಾಗಿರುವ ಪ್ರಕರಣ ಮತ್ತು ವಿಕ್ರಮ್ ಗೌಡ ಪ್ರಕರಣ ಬೇರೆ ಎಂದರು.

 ಕಾರ್ಯಸೂಚಿ ಏನೆಂದು ಗೊತ್ತಿಲ್ಲ : 

ಶಾಸಕಾಂಗ ಪಕ್ಷದ ಕಾರ್ಯಸೂಚಿ ಏನೆಂಬುದು ಗೊತ್ತಿಲ್ಲ. ಶಾಸಕಾಂಗ ಪಕ್ಷದಿಂದ ಈವರೆಗೆ ಯಾವುದೇ ಮಾಹಿತಿ ಬಂದಿಲ್ಲ. ಬಜೆಟ್ ಅಧಿವೇಶನ ಸಮೀಪಿಸುತ್ತಿದೆ. ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕೆಲಸಗಳ ಬಗ್ಗೆ ಹಾಗೂ ಜಾತಿಗಣತಿ ವರದಿ ಜಾರಿಗೆ ತರುವ ವಿಚಾರಗಳನ್ನು ಚರ್ಚೆ ಮಾಡುವ ಸಾಧ್ಯತೆ ಇದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News