HSRP ಅಳವಡಿಕೆ ಕಾಲಾವಧಿ ಮತ್ತೆ ವಿಸ್ತರಣೆ

Update: 2024-11-04 18:31 GMT

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ ಎಚ್‌ಎಸ್‌ಆರ್‌ಪಿ (High Security Registration Plates) ಅಳವಡಿಸಲು ಕಾಲಾವಧಿಯನ್ನು ಸರಕಾರ ಮತ್ತೆ ವಿಸ್ತರಿಸಿದೆ.

ಹಲವು ಬಾರಿ ಗಡುವು ವಿಸ್ತರಿಸಿದರೂ ಇನ್ನೂ ಹಲವರು ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಆದ್ದರಿಂದ ರಾಜ್ಯ ಸರ್ಕಾರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ಮತ್ತೆ ಗಡುವು ವಿಸ್ತರಿಸಿದ್ದು, ನವೆಂಬರ್ 30ರವರೆಗೆ ಸಮಯಾವಕಾಶ ನೀಡಿದೆ.

ನವೆಂಬರ್ 30ರೊಳಗೆ ನಂಬರ್ ಪ್ಲೇಟ್ ಬದಲಾವಣೆ ಮಾಡಿಕೊಳ್ಳದವರಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ.

1.90 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ ಮಾತ್ರ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. 


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News