ಎಚ್‌ಎಸ್‌ಆರ್‌ಪಿ ಅಳವಡಿಕೆ ಕಾಲಾವಧಿ ಸೆ.15 ವರಗೆ ವಿಸ್ತರಣೆ

Update: 2024-07-05 06:02 GMT

ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (High Security Registration Plates) ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಧಿ ವಿಸ್ತರಿಸಿದ್ದೇವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ‌.

ಎಚ್‌ಎಸ್‌ಆರ್‌ಪಿ ಜಾರಿಗೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಎಎಜಿ ವಿಕ್ರಮ್ ಹುಯಿಲಗೋಳ ಹಾಜರಾಗಿ, ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಸೆಪ್ಟಂಬರ್ 15ರವರೆಗೆ ರಾಜ್ಯ ಸರ್ಕಾರ ವಿಸ್ತರಿಸಿದೆ ಎಂದು ಮಾಹಿತಿ ನೀಡಿದರು. ಈ ವೇಳೆ ಮೇಲ್ಮನವಿದಾರು ತಮ್ಮ ವಾದ ಮಂಡಿಸಿಲು ಮನವಿ ಮಾಡಿದರು. ವಾದ ಆಲಿಸಲು ವಿಚಾರಣೆಯನ್ನು ಜುಲೈ 25ಕ್ಕೆ ಮುಂದೂಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News