ಹುಬ್ಬಳ್ಳಿ: ಪಾದಚಾರಿಗೆ ಢಿಕ್ಕಿ ಹೊಡೆದ ಬೈಕ್; ಸವಾರ, ಪಾದಚಾರಿ ಇಬ್ಬರೂ ಮೃತ್ಯು

Update: 2023-08-19 07:44 GMT

ಹುಬ್ಬಳ್ಳಿ: ವೇಗವಾಗಿ ಬಂದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಪಾದಚಾರಿ ಇಬ್ಬರೂ ಮೃತಪಟ್ಟ ಘಟನೆ ನಗರದ APMC ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತರನ್ನು ಮಕ್ತೂಂ ಹಾಗೂ ಬಸು ಎಂದು ಗುರುತಿಸಲಾಗಿದೆ. ಬೈಕ್ ಸವಾರ ಮಕ್ತೂಂ ವೇಗದಲ್ಲಿದ್ದರಿಂದ ನಿಯಂತ್ರಣ ಕಳೆದುಕೊಂಡು ರಸ್ತೆ ದಾಟುತ್ತಿದ್ದ ಬಸು ಎಂಬಾತನಿಗೆ ಢಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ. ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿ ಬೈಕ್ ಸವಾರ ಮಕ್ತೂಂ ಸ್ಥಳದಲ್ಲೇ ಮೃತಪಟ್ಟಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಪಾದಚಾರಿ ಬಸು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಎಪಿಎಮ್‌ ಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News