"ನಾನು ಆರೋಗ್ಯವಾಗಿದ್ದೇನೆ": ವದಂತಿಗಳಿಗೆ ತೆರೆ ಎಳೆದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್
Update: 2024-09-04 09:07 GMT
ಬೆಂಗಳೂರು: ಅನಾರೋಗ್ಯ ಕುರಿತಂತೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ವದಂತಿಗಳನ್ನು ನಂಬುವುದು ಬೇಡ. ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಮಾಧ್ಯಮ ಪ್ರಕಟನೆಯನ್ನು ಬಿಡುಗಡೆ ಮಾಡಿರುವ ಅವರು ಚಿಕೂನ್ ಗುನ್ಯಾ ತಮ್ಮನ್ನು ಕೆಲ ದಿನಗಳಿಂದ ಬಾಧಿಸಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೇನೆ. ಜ್ವರದಿಂದ ಈಗ ಸಂಪೂರ್ಣ ಚೇತರಿಕೆ ಕಂಡಿದ್ದು, ಗುಣಮುಖನಾಗಿದ್ದೇನೆ ಹಾಗೂ ಸದ್ಯಕ್ಕೆ ವಿಶ್ರಾಂತಿಯಲ್ಲಿದ್ದೇನೆ. ಕಾಳಜಿ ಹೊಂದಿರುವ ತಮ್ಮ ಹಿತೈಶಿಗಳು ಅನಗತ್ಯ ಆತಂಕಕ್ಕೆ ಒಳಗಾಗುವುದು ಬೇಡ ಎಂದಿದ್ದಾರೆ.