ಹೈಕಮಾಂಡ್ ಹೇಳಿದರೆ ನಾನೂ ಸಿಎಂ ಆಗಲು ಸಿದ್ಧ: ಸಚಿವ ಪ್ರಿಯಾಂಕ್ ಖರ್ಗೆ

Update: 2023-11-03 07:02 GMT

ಮೈಸೂರು: ʼಸಿಎಂ ಆಗಿ ಮುಂದುವರಿಯುತ್ತೇನೆʼ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನಾ ಸಭೆಗೆ ಶುಕ್ರವಾರ ಮೈಸೂರಿಗೆ ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ʼʼ ನಾನೇನು ಹೇಳಿಕೆ ನೀಡಿದರೂ ಅದು ನನ್ನ ವೈಯಕ್ತಿ ಅಭಿಪ್ರಾಯ ಮಾತ್ರ. ಒಂದು ವೇಳೆ ಹೈಕಮಾಂಡ್ ನೀನು ಸಿಎಂ ಆಗು ಅಂದರೆ ನಾನೂ ಸಿದ್ಧʼʼ ಎಂದು ಹೇಳಿದರು. 

ʼʼಸಿದ್ದರಾಮಯ್ಯ ಅವರದ್ದು ವೈಯಕ್ತಿಕ ಅಭಿಪ್ರಾಯʼʼ ಎಂದ ಅವರು,  ʼʼಅಧಿಕಾರ ಹಂಚಿಕೆ ಬಗ್ಗೆ ದೆಹಲಿಯಲ್ಲಿ ನಾಲ್ವರು ಮಾತನಾಡಿದ್ದಾರೆ. ಅವರಿಗೆ ಮಾತ್ರ ಈ ವಿಚಾರದ ಬಗ್ಗೆ ಸ್ಪಷ್ಟತೆ ಇದೆ. ಅವರನ್ನು ಹೊರತುಪಡಿಸಿ ಬೇರೆ ಯಾರೇ ಮಾತನಾಡಿದರೂ ಅದಕ್ಕೆ ಬೆಲೆ ಇಲ್ಲʼʼ ಎಂದು ತಿಳಿಸಿದರು.  

ʼʼಯಾರು ಮುಂದುವರಿಯಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ. ಎಲ್ಲರಿಗೂ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ, ಇದರಲ್ಲಿ ತಪ್ಪಿಲ್ಲʼʼ ಎಂದು ಸ್ಪಷ್ಟಪಡಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News