‘ಶಕ್ತಿ ಯೋಜನೆ’ ಸಾರಿಗೆ ಇಲಾಖೆಗೆ ಕಷ್ಟವೆಂದು ನಾನು ಎಲ್ಲೂ ಹೇಳಿಲ್ಲ : ರಾಮಲಿಂಗಾರೆಡ್ಡಿ

Update: 2024-11-03 12:23 GMT

ರಾಮಲಿಂಗಾರೆಡ್ಡಿ

ಬೆಂಗಳೂರು : ‘ಸಾರಿಗೆ ಬಸ್‍ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ‘ಶಕ್ತಿ ಯೋಜನೆ’ ನಡೆಸಲು ಸಾರಿಗೆ ಇಲಾಖೆಗೆ ಕಷ್ಟವಾಗುತ್ತಿದೆ ಎಂದು ನಾನು ಯಾವುದೇ ಮಾಧ್ಯಮಕ್ಕೂ ಪ್ರತಿಕ್ರಿಯೆ ನೀಡಿಲ್ಲ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಸ್ಪಷ್ಟನೆ ನೀಡಿದ್ದಾರೆ.

ರವಿವಾರ ಈ ಸಂಬಂಧ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿರುವ ಅವರು, ‘ನಾನು ಯಾವುದೇ ಮಾಧ್ಯಮದವರಿಗೂ ‘ಶಕ್ತಿ ಯೋಜನೆ’ ನಡೆಸಲು ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆಂಬ ಹೇಳಿಕೆಯನ್ನೆ ನೀಡಿಲ್ಲ. ಈ ರೀತಿಯ ಹೇಳಿಕೆಗಳು ವಿನಾ ಕಾರಣ ವ್ಯವಸ್ಥಿತವಾಗಿ ನಡೆಯುತ್ತಿರುವ ‘ಶಕ್ತಿ ಯೋಜನೆ’ಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ ಎಂದು ದೂರಿದ್ದಾರೆ.

‘ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ. ನನ್ನನ್ನು ಯಾವುದೇ ಮಾಧ್ಯಮದವರು ಈ ಬಗ್ಗೆ ಸಂರ್ಪಕಿಸಿಯೇ ಇಲ್ಲ. ನಾನು ಯಾರೊಂದಿಗೂ ಮಾತನಾಡಿಯೇ ಇಲ್ಲದಿರುವುದರಿಂದ ಈ ರೀತಿಯ ಹೇಳಿಕೆಗಳನ್ನು ಮಾಧ್ಯಮದವರು ಪ್ರಕಟಿಸುವ ಮುನ್ನ ನನ್ನನ್ನು ಖುದ್ದು ಸಂರ್ಪಕಿಸಿ ಪ್ರಕಟಿಸಬೇಕು ಎಂದು ರಾಮಲಿಂಗಾರೆಡ್ಡಿ ಕೋರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News