ಸಂಘ ಪರಿವಾರದ ಸಂಘಟನೆಯ ಸಮಾವೇಶ| ನನಗೆ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ, ಆಹ್ವಾನವೂ ಬಂದಿಲ್ಲ: ಸಚಿವ ಪ್ರಿಯಾಂಕ್‌ ಖರ್ಗೆ

Update: 2024-12-01 16:54 GMT

ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗುಲ್ಬರ್ಗಾದ ಸೇಡಂನಲ್ಲಿ ಸಂಘ ಪರಿವಾರದ ಕೆ.ಏನ್. ಗೋವಿಂದಾಚಾರ್ಯನವರ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಎಂಬ ಸಂಸ್ಥೆಯು ನಡೆಸುತ್ತಿರುವ ಭಾರತೀಯ ಸಂಸ್ಕೃತಿ ಉತ್ಸವ -7 ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಆಹ್ವಾನ ನೀಡದೇ ತನ್ನ ಹೆಸರು ಹಾಕಿದ್ದಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಅವರು, "ಭಾರತ ವಿಕಾಸ ಸಂಗಮ ಸಂಸ್ಥೆ ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಎಂಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವುದನ್ನು ಮಾಧ್ಯಮಗಳ ಮೂಲಕ ಗಮನಿಸಿದೆ. ನನಗೆ ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ಇಲ್ಲ, ನನಗೆ ಆಹ್ವಾನವೂ ಬಂದಿಲ್ಲ. ನನಗೆ ಆಹ್ವಾನ ನೀಡದೆಯೇ ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಿ ಹಂಚುವುದು ಸಮಂಜಸವಲ್ಲ." ಎಂದು ಹೇಳಿದ್ದಾರೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.

ಸಂಘ ಪರಿವಾರದ ಸಂಘಟನೆಯ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವರು ಭಾಗವಹಿಸುತ್ತಾರೆ ಎಂಬ ವಿಚಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಿಎಂ ಸ್ಪಷ್ಟನೆ ನೀಡಿದ್ದರು.

 "ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ." ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News