ವಂಚನೆ ಪ್ರಕರಣದ ಆರೋಪಿ ಚೈತ್ರಾಳಿಗೆ ನಾನು ಆಶ್ರಯ ನೀಡಿಲ್ಲ: ಕಾಂಗ್ರೆಸ್ ವಕ್ತಾರೆ ಸುರೈಯ್ಯಾ ಅಂಜುಮ್ ಸ್ಪಷ್ಟನೆ

Update: 2023-09-13 10:26 GMT

ಉಡುಪಿ: ವಂಚನೆ ಪ್ರಕರಣದಲ್ಲಿ ಬಂಧಿತಳಾಗಿರುವ ಚೈತ್ರಾಳಿಗೆ ನಾನು ನಮ್ಮ ಮನೆಯಲ್ಲಿ ಯಾವುದೇ ಆಶ್ರಯ ನೀಡಿಲ್ಲ. ಇದೆಲ್ಲವೂ ಸುಳ್ಳು ಸುದ್ದಿ ಎಂದು ಯುವ ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಮ್ ಸ್ಪಷ್ಟಪಡಿಸಿದ್ದಾರೆ.

ಆಕೆಗೆ ನಾನು ಕಳೆದ ಏಳು ದಿನಗಳಿಂದ ಆಶ್ರಯ ನೀಡಿದ್ದೇನೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಆದರೆ ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಎಫ್ಐಆರ್ ದಾಖಲಾಗಿರುವುದು ಸೆ. 8ರಂದು. ಹಾಗಾದರೆ ಏಳು ದಿನ ಹೇಗೆ ಆಗುತ್ತೆ.ಹಲವು ವರ್ಷಗಳ ಹಿಂದೆ ನಾನು ಮತ್ತು ಆಕೆ ಸ್ಥಳೀಯ ಸುದ್ದಿ ವಾಹಿನಿಯೊಂದರಲ್ಲಿ ಕೆಲಸ ಮಾಡಿದ್ದೇವೆ. ಅದು ಬಿಟ್ಟ ಬಳಿಕ ಆಕೆಯೊಂದಿಗೆ ಯಾವುದೇ ಸಂಬಂಧ ಇರಲಿಲ್ಲ. ಸುದ್ದಿವಾಹಿಗಳಲ್ಲಿ ಬರುತ್ತಿರುವ ಸುಳ್ಳು ಸುದ್ದಿಗಳಿಂದ ನನಗೆ ಮಾನಸಿಕ ಹಿಂಸೆಯಾಗುತ್ತಿದೆ. ಇದರ ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ನನಗೆ ನ್ಯಾಯ ಸಿಗಬೇಕು ಎಂದು ಅವರು ವಾರ್ತಾಭಾರತಿಗೆ ತಿಳಿಸಿದ್ದಾರೆ

ನನ್ನ ಮನೆಯಲ್ಲಿ ಆಕೆಯನ್ನು ಬಂಧಿಸಿದ್ದಾರೆಂದು ಕೆಲವು ಮಾಧ್ಯಮಗಳು ವರದಿ ಮಾಡುತ್ತಿದೆ. ಆದರೆ ಸಿಸಿಬಿ ಪೊಲೀಸರಿಂದ ನನಗೆ ಈವರೆಗೆ ಯಾವುದೇ ನೋಟಿಸ್ ಬಂದಿಲ್ಲ.  ಆಕೆಯನ್ನು ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್ ಪ್ರದೇಶದಲ್ಲಿ ವಶಕ್ಕೆ ಪಡೆದಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಂಡು ಬರುತ್ತಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News