ಯಾವುದೇ ಫಲಾಪೇಕ್ಷೆ ಇಲ್ಲದೇ ಬಿಜೆಪಿ ಸೇರಿದ್ದೇನೆ: ಗಾಲಿ ಜನಾರ್ದನ ರೆಡ್ಡಿ

Update: 2024-03-25 09:15 GMT

ಬೆಂಗಳೂರು: ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಲು ಯಾವುದೇ ಫಲಾಪೇಕ್ಷೆ ಇಲ್ಲದೇ ಬಿಜೆಪಿ ಸೇರಿದ್ದೇನೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 

ಸೋಮವಾರ ಸೋಮವಾರ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಪಕ್ಷ ಸೃಎಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು , ಕಲ್ಯಾಣ ರಾಜ್ಯ ಪ್ರಗತಿ ಪಕ್ಷವನ್ನು ವಿಲೀನ ಮಾಡಿದ್ದೇವೆ.  ಯಡಿಯೂರಪ್ಪ ಅವರ ಆಶೀರ್ವಾದ, ವಿಜಯೇಂದ್ರರ ನೇತೃತ್ವದಲ್ಲಿ ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರು, ಬೆಂಬಲಿಗರು ಬಿಜೆಪಿ ಸೇರಿದ್ದೇವೆ. ದೇಶದ ಸಮಗ್ರತೆ, ಸರ್ವತೋಮುಖ ಅಭಿವೃದ್ಧಿಗೆ, ವಿಶ್ವಗುರುವಾಗಿ ಭಾರತವನ್ನು ತರುವ ನಿಟ್ಟಿನಲ್ಲಿ ಕೆಲಸ ಮಾಡಿದ ನರೇಂದ್ರ ಮೋದಿ ಅವರ ಕೈಯನ್ನು ಬಲಪಡಿಸಲು ಬಿಜೆಪಿ ಸೇರಿದ್ದೇನೆ. ಅಮಿತ್ ಶಾ ಅವರು ನನ್ನನ್ನು ದೆಹಲಿಗೆ ಆಹ್ವಾನಿಸಿ ಬಿಜೆಪಿಗೆ ಸೇರಲು ತಿಳಿಸಿದ್ದಾರೆ. ಅದರಂತೆ ಬಿಜೆಪಿ ಸೇರಿದ್ದೇನೆ ಎಂದರು.

ಯಡಿಯೂರಪ್ಪ ಅವರು ನನಗೆ ಸಚಿವನಾಗಲು ಅತಿ ಚಿಕ್ಕ ವಯಸ್ಸಿನಲ್ಲೇ ಅವಕಾಶ ಕೊಟ್ಟಿದ್ದರು. ಬಿಜೆಪಿ ಕಟ್ಟುವ ಅನುಭವ ನನಗಾಯಿತು. ಯಡಿಯೂರಪ್ಪ ಅವರ ಪುತ್ರರೇ ರಾಜ್ಯಾಧ್ಯಕ್ಷನಾಗಿರುವ ಸಂದರ್ಭದಲ್ಲಿ ಪಕ್ಷ ಸೇರಿ ಮತ್ತೆ ಕೆಲಸ ಮಾಡುವ ಅವಕಾಶ ಸಿಗುತ್ತಿದೆ. ಎಂದರು. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ದುಡಿಯುವೆ ಎಂದರು.

ಪಕ್ಷ ಕೊಡುವ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸುವೆ. ಮತ್ತೆ ಮನೆಗೆ ಬಂದಂತೆ ಭಾಸವಾಗುತ್ತಿದೆ. ನನ್ನ ರಕ್ತದ ಕಣಕಣದಲ್ಲೂ ಬಿಜೆಪಿ ಇತ್ತು. ಪಕ್ಷವೆಂಬ ತಾಯಿಯ ಮಡಿಲಿಗೆ ಕ್ಷೇಮವಾಗಿ ಸೇರಿದ್ದೇನೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದರಾದ ಪಿ.ಸಿ.ಮೋಹನ್, ದೇವೇಂದ್ರಪ್ಪ, ಕರ್ನಾಟಕ ಸಹ ಉಸ್ತುವಾರಿ ಸುಧಾಕರ ರೆಡ್ಡಿ, ಮಾಜಿ ಸಚಿವ ಬಿ.ಶ್ರೀರಾಮುಲು, ಮುಖ್ಯ ಸಚೇತಕ ಎನ್.ರವಿಕುಮಾರ್, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್, ಮಾಜಿ ಸಚಿವ ಆನಂದ್ ಸಿಂಗ್ ಮತ್ತಿತರ ಮುಖಂಡರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News