ಕಾಂಗ್ರೆಸ್ ಪಕ್ಷಕ್ಕೆ ಬದ್ಧತೆ ಇದ್ದರೆ ಸದಾಶಿವ ಆಯೋಗದ ವರದಿ ಜಾರಿ ಮಾಡಲಿ: ಬೊಮ್ಮಾಯಿ
Update: 2024-01-19 13:14 GMT
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಬದ್ಧತೆ ಇದ್ದರೆ ಪರಿಶಿಷ್ಟರ ಮೀಸಲಾತಿ ವರ್ಗೀಕರಣ ಸಂಬಂಧದ ನ್ಯಾ.ಸದಾಶಿವ ಆಯೊಗದ ವರದಿಯನ್ನು ಜಾರಿ ಮಾಡಲಿ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.
ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಸದಾಶಿವ ಆಯೋಗದ ವರದಿ ಜಾರಿ ಮಾಡುವ ವಿಚಾರದಲ್ಲಿ ಕಾಂಗ್ರೆಸ್ ಮೊದಲಿನಿಂದಲೂ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇವರಿಗೆ ಬದ್ದತೆ ಇದ್ದರೆ. ವರದಿ ಜಾರಿ ಮಾಡಿ, ಒಳಮೀಸಲಾತಿ ಆಧಾರದಲ್ಲಿ ನೇಮಕಾತಿ ಹಾಗೂ ಭಡ್ತಿ ನೀಡಲಿ ಎಂದು ಆಗ್ರಹಿಸಿದರು.
ಕೇಂದ್ರದಿಂದ ಅನುದಾನ ಕುರಿತು ರಾಜ್ಯದ ವಿಚಾರಗಳಿಗೆ ಕಾಂಗ್ರೆಸ್ ತಿರುಚುವ ಕೆಲಸ ಮಾಡುತ್ತಿದೆ. ಅವರು ಬಹಿರಂಗ ಚರ್ಚೆಗೆ ಪ್ರಧಾನಿಗೆ ಆಹ್ವಾನ ಕೊಟ್ಟಿರುವುದಕ್ಕೆ ನಾವು ಉತ್ತರ ಕೊಟ್ಟಿದ್ದೇವೆ. ಮೊದಿಯವರು ದೊಡ್ಡ ಕೆಲಸ ಮಾಡಿದ್ದಾರೆ. 14ನೆ ಹಣಕಾಸಿಗಿಂತ 15ನೆ ಹಣಕಾಸು ಆಯೋಗದ ಅವಧಿಯಲ್ಲಿ ರಾಜ್ಯಕ್ಕೆ 1ಲಕ್ಷ ಕೊಟಿ ರೂ.ಹೆಚ್ಚಿಗೆ ಬಂದಿದೆ ಎಂದರು.