ಭ್ರಷ್ಟಾಚಾರದ ವಿಶ್ವಗುರುವನ್ನು ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರ: ನಟ ಕಿಶೋರ್‌ ಕುಮಾರ್‌

Update: 2023-09-16 07:34 GMT

ಬೆಂಗಳೂರು: ಬಹು ಭಾಷಾ ನಟ ಕಿಶೋರ್‌ ಕುಮಾರ್‌ ಅವರು ಕೇಂದ್ರ ಸರಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. 

ಇತ್ತೀಚೆಗೆ ದೆಹಲಿಯಲ್ಲಿ ಎರಡು ದಿನಗಳ ಕಾಲ ನಡೆದ ಜಿ-20 ಶೃಂಗಸಭೆಗೆ ಕೇಂದ್ರ ಸರಕಾರ ಸಾವಿರಾರು ಕೋಟಿ ಖರ್ಚು ಮಾಡಿದೆ ಎನ್ನಲಾದ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿರುವ  ನಟ ಕಿಶೋರ್‌ ಕುಮಾರ್‌, ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಅವರ ಪೋಸ್ಟ್‌ ಹೀಗಿದೆ... 

ʼʼಭ್ರಷ್ಟಾಚಾರದ ವಿಶ್ವಗುರು - ಜಿ 20 ಕ್ಕೆ ದೇಶ ಕೊಟ್ಟ ಬಜೆಟ್ - 900 ಕೋಟಿ. ಲೆಕ್ಕ ಕೊಟ್ಟದ್ದು - 4100 ಕೋಟಿ (ಶಾಶ್ವತ ಆಸ್ತಿ, ಸೌಕರ್ಯಗಳ ಹೆಸರಲ್ಲಿ) ಮಥುರಾ ರೋಡಿಗೆ ಕೊಟ್ಟ ಬಜೆಟ್ (ಕಿ. ಮೀ.ಗೆ) -18 ಕೋಟಿ, ಲೆಕ್ಕ ಕೊಟ್ಟದ್ದು (ಕಿ. ಮೀ.ಗೆ)- 256 ಕೋಟಿ. ಅದಾನಿ ಹೆಸರಲ್ಲಿ ಇನ್ನೆಷ್ಟೊ..ʼʼ ಎಂದು ಕೇಂದ್ರಕ್ಕೆ ಪ್ರಶ್ನೆ ಮಾಡಿದ್ದಾರೆ. 

ʼʼಇಲ್ಲಿ ನುಂಗಿದ ಹಣದ 10 % ಈ ಸ್ಲಮ್ಮುಗಳಿಗೆ ಖರ್ಚು ಮಾಡಿದ್ದರೆ ಪರದೆಯಲ್ಲಿ ಮುಚ್ಚುವ ಖರ್ಚು ಉಳಿಯುತ್ತಿರಲಿಲ್ಲವೇ ?? ಸ್ಲಂ ವಾಸಿಗಳು ಮನುಷ್ಯರಲ್ಲವೇ? ಭಾರತೀಯರಲ್ಲವೇ? ಪ್ರಜೆಗಳ ಕೋಟಿ ಕೋಟಿ ಹಣ ಜೇಬಿಗೆ ಸೇರಿಸಿ ಪ್ರಶ್ನೆಗಳನ್ನೆದುರಿಸದೇ ಟಾಟಾ ಮಾಡಿ ಹೋದವರು, ಕೊರಳ ಪಟ್ಟಿ ಹಿಡಿದು ಪ್ರಶ್ನೆ ಕೇಳದೆ ಉಧೋ ಉಧೋ ಎನ್ನುತ್ತಾ ನಿಂತ ಮಾನಗೆಟ್ಟ ಮುಖ್ಯವಾಹಿನಿ ಮಾಧ್ಯಮಗಳು.ಇವರೆಲ್ಲರನ್ನೂ ಪ್ರಶ್ನಿಸದೆ ಬಾಯಿಮುಚ್ಚಿ ಕೂತರೆ ಇಡೀ ದೇಶಕ್ಕೇ ಪರದೆ ಹಾಕಬೇಕಾದೀತು ಎಚ್ಚರʼʼ ಎಂದು ನಟ ಕಿಶೋರ್‌ ಕುಮಾರ್‌ ತಮ್ಮ ಪೋಸ್ಟ್‌ ನಲ್ಲಿ ಬರೆದುಕೊಂಡಿದ್ದಾರೆ. 

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News