ವಾಲ್ಮೀಕಿ ನಿಗಮದಲ್ಲಿ ಅಕ್ರಮ | ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ಸಚಿವ ಬಿ.ನಾಗೇಂದ್ರ

Update: 2024-06-06 15:20 GMT

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಜನ ಸೇವೆ, ಕ್ರೀಡಾ ಸಚಿವ ಬಿ.ನಾಗೇಂದ್ರ  ಅವರು ಇಂದು ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಾಗೇಂದ್ರ "ನನ್ನ ಸ್ವ ಇಚ್ಚೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ" ಎಂದು ಒಂದೇ ಸಾಲಿನಲ್ಲಿ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. 

ಈ ಸಂದರ್ಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಉಪಸ್ಥಿತರಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News