ವಾಲ್ಮೀಕಿ ನಿಗಮದಲ್ಲಿ ಅಕ್ರಮ | ಸಚಿವರ ರಾಜಿನಾಮೆಗಾಗಿ ಬಿಜೆಪಿಯಿಂದ ತೀವ್ರ ಹೋರಾಟ : ಆರ್.ಅಶೋಕ್

Update: 2024-06-03 11:57 GMT

ಬೆಂಗಳೂರು: "ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಡಿ ಸಚಿವ ನಾಗೇಂದ್ರರ ರಾಜಿನಾಮೆ ಪಡೆಯುವವರೆಗೆ ಬಿಜೆಪಿ ಹೋರಾಟ ಮುಂದುವರೆಸಲಿದೆ" ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ತಿಳಿಸಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ʼಕಾಂಗ್ರೆಸ್ ಸರಕಾರ ದಲಿತರ 187 ಕೋಟಿ ರೂ. ಹಣವನ್ನು ನುಂಗಿ ನೀರು ಕುಡಿದಿದೆ. ಸಿದ್ದರಾಮಯ್ಯನವರು ಸಚಿವರ ರಾಜಿನಾಮೆ ಪಡೆಯದೆ ಭಂಡತನ ಮೆರೆಯುತ್ತಿದ್ದಾರೆʼ ಎಂದು ಟೀಕಿಸಿದರು.

ʼಕಳ್ಳ- ಖದೀಮರಾದ ಕಾಂಗ್ರೆಸ್ಸಿಗರು ಒಂದು ದಿನದ ಹೋರಾಟಕ್ಕೆ ಬಗ್ಗುವುದಿಲ್ಲ. ಆದ್ದರಿಂದ ರಾಜ್ಯಪಾಲರ ಭೇಟಿ, ಶಾಸಕರಿಂದ ಗಾಂಧಿ ಪ್ರತಿಮೆ ಎದುರು ಹೋರಾಟ, ಜಿಲ್ಲೆ, ಜಿಲ್ಲೆಗಳಲ್ಲಿ ಹೋರಾಟ ಮಾಡುವ ಕುರಿತು ಚರ್ಚೆ ಮಾಡಿದ್ದೇವೆʼ ಎಂದು ವಿವರಿಸಿದರು.

ಸಿ.ಟಿ.ರವಿ, ಎನ್.ರವಿಕುಮಾರ್, ಎಂ.ಜಿ.ಮುಳೆ ಅವರ ಆಯ್ಕೆ ಕುರಿತು ಮಾತನಾಡಿ, ಪಕ್ಷಕ್ಕಾಗಿ ದುಡಿದವರಿಗೆ ಆದ್ಯತೆ ಕೊಟ್ಟಿದ್ದೇವೆ. ವಿಧಾನಪರಿಷತ್ತಿನಲ್ಲಿ ನಮ್ಮ ಧ್ವನಿ ಹೆಚ್ಚಾಗಲು ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News