ಹಳೆಯ ಪಿಂಚಣಿ ಯೋಜನೆ ಜಾರಿ ; ಸರಕಾರದಿಂದ ಸಮಿತಿ ರಚನೆ

Update: 2024-08-17 15:54 GMT

ಬೆಂಗಳೂರು : ರಾಜ್ಯ ಸರಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಬೇಕು ಎಂಬ ಒತ್ತಾಯದ ಬೆನ್ನಲ್ಲೇ ಶನಿವಾರದಂದು ರಾಜ್ಯ ಸರಕಾರವು ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿ, ಆದೇಶ ಹೊರಡಿಸಿದೆ.

ಕರ್ನಾಟಕ ರಾಜ್ಯದಲ್ಲಿ 2006ರ ಎ.1ರ ನಂತರ ಸರಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯಲ್ಲಿ ಆಗಬೇಕಾದ ಮಾರ್ಪಾಡುಗಳು, ಈಗಿರುವ ರಚನಾ ವ್ಯವಸ್ಥೆಯಲ್ಲಿ ಮಾಡಬಹುದಾದ ಬದಲಾವಣೆ ಕುರಿತು ಪರಿಶೀಲಿಸಲು ಐವರು ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ಸರಕಾರ ರಚಿಸಿದೆ.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯ ಬಿಸ್ವಾಸ್, ಆರ್ಥಿಕ ಇಲಾಖೆಯ(ವಿತ್ತೀಯ ಸುಧಾರಣೆ) ಕಾರ್ಯದರ್ಶಿ ಡಾ. ವಿಶಾಲ್ ಆರ್. ಸಮಿತಿಯ ಸದಸ್ಯರಾಗಿದ್ದಾರೆ. ಆರ್ಥಿಕ ಇಲಾಖೆಯ(ವೆಚ್ಚ) ಕಾರ್ಯದರ್ಶಿ ಡಾ. ಎಂ.ಟಿ. ರೇಜು ಸಮಿತಿಯ ಸದಸ್ಯರಾಗಿದ್ದಾರೆ.

ಈ ಸಮಿತಿಯು ರಾಷ್ಟ್ರೀಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸುವ ನಿರ್ಧಾರಗಳನ್ನು ಸೂಕ್ತ ಅಧ್ಯಯನ ನಡೆಸಿ, ವರದಿಯನ್ನು ಸಲ್ಲಿಸಬೇಕು ಆದೇಶದಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News