ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ

Update: 2023-09-14 07:06 GMT

ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರಿನ ಉದ್ಯಮಿ, ಬಿಜೆಪಿ ಮುಖಂಡರೊಬ್ಬರಿಗೆ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚಿಸಿರುವ ಪ್ರಚೋದನಾಕಾರಿ ಭಾಷಣಗಾರ್ತಿ ಚೈತ್ರಾ ಕುಂದಾಪುರ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. 

ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼʼಚೈತ್ರಾ ಕುಂದಾಪುರ ಕೇಸ್ ನ ವ್ಯವಹಾರಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಕಠಿಣ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕುʼʼ ಎಂದರು. 

ʼʼಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಹೋರಾಟ ಹಲವರು ಮಾಡ್ತಾರೆ, ಹಾಗಂತ ಅದಕ್ಕೆಲ್ಲವಕ್ಕೂ ಪಕ್ಷಕ್ಕೆ ಸಂಬಂಧ ಇಲ್ಲ. ತನಿಖೆ ಆಗಲಿ, ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿʼʼ ಎಂದು ಆಗ್ರಹಿಸಿದರು. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News