ಬೆಂಗಳೂರಿನಲ್ಲಿ ‘ಬ್ಯಾರೀಸ್ ಸೌಹಾರ್ದ ಭವನ’ ಉದ್ಘಾಟನೆ
ಬೆಂಗಳೂರು, ಸೆ.30: ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ವತಿಯಿಂದ ಬೆಂಗಳೂರಿನ ಎಚ್‌ಬಿಆರ್ ಲೇಔಟ್‌ನ ಬಿಡಿಎ ಕಾಂಪ್ಲೆಕ್ಸ್‌ನ ಎದುರುಗಡೆ ನಿರ್ಮಿಸಲ್ಪಟ್ಟ ‘ಬ್ಯಾರೀಸ್ ಸೌಹಾರ್ದ ಭವನ’ ಮತ್ತು ಮಾಜಿ ಸಚಿವ ಬಿ.ಎ. ಮೊಹಿದಿನ್ ಸ್ಮಾರಕ ಆಡಿಟೋರಿಯಂ ಅನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಇಂಧನ ಖಾತೆಯ ಸಚಿವ ಕೆ.ಜೆ. ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ವಿಧಾನ ಪರಿಷತ್‌ನ ಸರಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್, ಬ್ಯಾರಿ ಸೌಹಾರ್ದ ಭವನ ಕಟ್ಟಡ ಸಮಿತಿಯ ಅಧ್ಯಕ್ಷ ಸೈಯದ್ ಮುಹಮ್ಮದ್ ಬ್ಯಾರಿ ಪಾಲ್ಗೊಂಡಿದ್ದರು.
ವಿಧಾನ ಪರಿಷತ್ ಸದಸ್ಯ ಹಾಗೂ ದಿ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಬಿ.ಎಂ. ಫಾರೂಕ್ ಅಧ್ಯಕ್ಷತೆ ವಹಿಸಿದ್ದರು. ಕವಿ ಶರೀಫ್ ನಿರ್ಮುಂಜೆ ಬ್ಯಾರಿ ಧ್ಯೇಯಗೀತೆ ಹಾಡಿದರು. ಉಮರ್ ಟಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಅತ್ತೂರು ಚಾಯಬ್ಬ ಕಾರ್ಯಕ್ರಮ ನಿರೂಪಿಸಿದರು.