ಡೆಂಗ್ಯೂ ಪ್ರಕರಣಗಳ ಹೆಚ್ವಳ | ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡ ಹೈಕೋರ್ಟ್

Update: 2024-07-10 11:04 GMT

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ವಳಕ್ಕೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ‌.

ರಾಜ್ಯದ ಪತ್ರಿಕೆಯೊಂದಕ್ಕೆ ರಾಯಚೂರಿನ ವಿಜಯ್ ಕುಮಾರ್ ಎಚ್.ಕೆ ಬರೆದ ಪತ್ರ ಆಧರಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿರುವ ಹೈಕೋರ್ಟ್, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರಿಗೆ ಆರೋಗ್ಯ ಹಾಗೂ ಚಿಕಿತ್ಸೆಯ ಹಕ್ಕಿದೆ ಎಂದು ಹೇಳಿದೆ. ಬೆಂಗಳೂರು ಮತ್ತು ಗ್ರಾಮೀಣ ಭಾಗದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅಂಜಾರಿಯಾ ಅವರಿದ್ದ ಪೀಠ ಆತಂಕ ವ್ಯಕ್ತಪಡಿಸಿತು.

ಅಲ್ಲದೆ, ಪಿಐಎಲ್‌ಗೆ ಉತ್ತರಿಸುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆಯ ಕಾರ್ಯದರ್ಶಿಗೂ ತುರ್ತು ಹೈಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ. ಜುಲೈ 23ರೊಳಗೆ ಡೆಂಗ್ಯೂ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ತಿಳಿಸಿ ಎಂದು ಸರಕಾರಕ್ಕೆ ಸೂಚಿಸಿದೆ. ಗ್ರಾಮೀಣ ಹಾಗೂ ನಗರದಲ್ಲಿ ವೈದ್ಯಕೀಯ ಸೌಲಭ್ಯಗಳು. ಸೊಳ್ಳೆಗಳ ಸಂತಾನ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳು.‌ ಜನ ಜಾಗೃತಿ ಕ್ರಮಗಳ ಬಗ್ಗೆ ವಿವರ ನೀಡಲು ಹೈಕೋರ್ಟ್, ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News