ಸ್ವಾತಂತ್ರೋತ್ಸವ: ಇಂಡಿಯಲ್ಲಿ ಅರ್ಥಪೂರ್ಣ ಆಚರಣೆಗೆ ಪೂರ್ವಭಾವಿ ಸಭೆ
ಇಂಡಿ : ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಉಪವಿಭಾಗ ನೂತನ ಅಧಿಕಾರಿ ಅಬೀದ್ ಗದ್ಯಾಳ ಶುಕ್ರವಾರ ಹೇಳಿದರು.
ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ 4 ಅಗಸ್ಟ್ ರಂದು ತಾಲೂಕು ಆಡಳಿತ ಸೌಧದಲ್ಲಿ ಹಮ್ಮಿಕೊಂಡಿರುವ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.
ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ಯ ಅಗಸ್ಟ್ 15 ರಂದು ಬೆಳಿಗ್ಗೆ 8 ಘಂಟೆಗೆ ತಾಲ್ಲೂಕು ಆಡಳಿತ ಸೌಧದ ಹಾಗೂ ವಿವಿಧ ತಾಲ್ಲೂಕು ಕಛೇರಿ ಹಾಗೂ ಇತರೆ ಕಡೆ ಧ್ವಜಾರೋಹಣ ನೆರವೆರಿಲಿದ್ದು ತದನಂತರ 9 ಘಂಟೆಗೆ ತಾಲ್ಲೂಕು ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದೆ. ಸ್ವತಂತ್ರೋತ್ಸವ ಹಿನ್ನೆಲೆಯಲ್ಲಿ ರಚಿಸಲ್ಪಟ್ಟ ಸಮಿತಿಗಳು ವಹಿಸಲಾದ ಕರ್ತವ್ಯಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಯಾವುದೇ ನಿಯಮ ಉಲ್ಲಂಘನೆ ಯಾಗದಂತೆ ಹಾಗೂ ಸರಕಾರದ ಶಿಷ್ಟಾಚಾರ ಪಾಲನೆಯೊಂದಿಗೆ ಕಾರ್ಯಕ್ರಮವು ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು ಎಂದು ಸೂಚಿಸಿದರು.
ಅದಲ್ಲದೇ ತಾಲ್ಲೂಕು ಕೇಂದ್ರದ ಪ್ರಮುಖ ರಸ್ತೆಗಳು, ವೃತ್ತಗಳ ಸ್ವಚ್ಚತೆ ಹಾಗೂ ಅಲಂಕಾರಕ್ಕೆ ಕ್ರೀಡಾಂಗಣದಲ್ಲಿ ಕುಡಿಯುವ ನೀರಿನ ಬಗ್ಗೆ ಹಾಗೂ ಹಿರಿಯ ನಾಗರಿಕರಿಗೆ, ವಿಶೇಷ ವ್ಯಕ್ತಿಗಳಿಗೆ, ಮಹಿಳೆಯರಿಗೆ, ವಿಧ್ಯಾರ್ಥಿಗಳಿಗೆ ಮತ್ತು ಪತ್ರಿಕಾ ಮಾಧ್ಯಮ ದವರಿಗೆ ಸೂಕ್ತ ಅಸನದ ವ್ಯವಸ್ಥೆ ಕಲ್ಪಿಸಬೇಕು. ಇನ್ನೂ ವಿಧ್ಯಾರ್ಥಿಗಳಿಗಾಗಿ ಲಘು ಉಪಾಹಾರದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯುವ ಪಥಸಂಚಲನಕ್ಕೆ ಪೋಲಿಸ್ ಇಲಾಖೆಯಿಂದ ಅಗತ್ಯ ಪೂರ್ವಭಾವಿ ತರಬೇತಿ ನೀಡಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಕೆ ಎಸ್ ಆರ್ ಟಿ ಸಿ ಬಸ್ ಸೌಕರ್ಯ ಒದಗಿಸಬೇಕು. ಇನ್ನೂ ಕ್ರೀಡಾಂಗಣದಲ್ಲಿ ಆರೋಗ್ಯ ಇಲಾಖೆಯಿಂದ ತುರ್ತು ಪರಿಸ್ಥಿತಿ ನಿರ್ವಹಣೆಗಾಗಿ ಅಗತ್ಯ ಸಿಬ್ಬಂದಿಯೊಂದಿಗೆ ಅಂಬುಲೆನ್ಸ್ ಹಾಗೂ ಅಗ್ನಿ ಶಾಮಕ ಇಲಾಖೆಯಿಂದ ವಾಹನ ಒದಗಿಸಬೇಕು. ಶಾಲಾ ಮಕ್ಕಳಿಂದ ನೃತ್ಯ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನಗೈದ ಗಣ್ಯರಿಗೆ ಸನ್ಮಾನಿ ಗೌರವಿಸಲಾಗುವುದು ಎಂದು ಹೇಳಿದರು. ಅದಲ್ಲದೇ ಗ್ಯಾರೆಂಟಿ ಯೋಜನೆ ಬಗ್ಗೆ ಸಂಪೂರ್ಣ ಪ್ರಗತಿಯ ಮಾಹಿತಿ ಕೊಡಬೇಕು ಎಂದು ಸಂಬಂಧಿಸಿದ ಇಲಾಖೆಯವರಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಮಾದಿಗರ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಹೊಸಮನಿ ಮಾತಾಮಾಡಿದ ಅವರು, ನಗರದಲ್ಲಿ ಸ್ವಚ್ಚತೆ ಕಾರ್ಯ ಬಗ್ಗೆ ಅತೀವ ಕಾಳಜಿವಹಿಸಿದ್ದು ಹರ್ಷದ ವಿಚಾರ, ಆದರೆ ನಗರದ ಪ್ರಮುಖ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು ಸಾರ್ವಜನಿಕರಿಗೆ ಅಪಾಯ ಮಾಡುತ್ತಿವೆ. ಇನ್ನೂ ಶರಣರ ಮತ್ತು ರಾಷ್ಟ್ರೀಯ ಕಾರ್ಯಕ್ರಮದ ಪ್ರತಿ ಪೂರ್ವಭಾವಿ ಸಭೆಗೆ ವಿವಿಧ ಇಲಾಖೆ ತಾಲೂಕು ಅಧಿಕಾರಿಗಳು ಗೈರಾಗುತ್ತಿದ್ದಾರೆ. ಅದರ ಬಗ್ಗೆ ಕಾಳಜಿವಹಿಸಬೇಕು ಎಂದು ಮನವಿ ಮಾಡಿದರು. ಇನ್ನೂ ತಹಶಿಲ್ದಾರ ನಾಗಯ್ಯ ಹಿರೇಮಠ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಆರ್ ಟಿ ಹಿರೇಮಠ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಬಿ.ಜೆ ಇಂಡಿ, ಸಬ್ ರಿಜಿಸ್ಟರ್ ಅಧಿಕಾರಿ ಮಹಮ್ಮದ ರಫೀಕ್ ಪಟೇಲ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಂಘಟನೆಗಳ ಅಧ್ಯಕ್ಷರು ಮುಖಂಡರು ಉಪಸ್ಥಿತರಿದ್ದರು.