ಸೌದಿಯಲ್ಲಿ ಬಂಧನ | ಶೈಲೇಶ್ ಕುಮಾರ್ ಗೆ ವಕೀಲರ ನೆರವು ಒದಗಿಸಲಿದೆಯೇ?: ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ
ಬೆಂಗಳೂರು, ಜು.18: ಧರ್ಮನಿಂದನೆ ಆರೋಪದಡಿ ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಮಂಗಳೂರಿನ ಶೈಲೇಶ್ಕುಮಾರ್ ಅವರು ಮೇಲ್ಮನವಿಯ ಅರ್ಜಿ ವಿಚಾರಣೆಯ ವೇಳೆ ತನ್ನ ಇಚ್ಛೆಯ ವಕೀಲರನ್ನು ನೇಮಿಸಿಕೊಳ್ಳಬಹುದೇ? ಹೌದು ಎಂದಾದರೇ ಭಾರತ ಸರಕಾರವು ಅವರಿಗೆ ವಕೀಲರ ನೆರವು ಒದಗಿಸಲಿದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರಿಸಲು ಕೇಂದ್ರ ಸರಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ.
ಶೈಲೇಶ್ ಕುಮಾರ್ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಸೂಚನೆ ನೀಡಿದೆ.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಕೇಂದ್ರ ಸರಕಾರವನ್ನು ಪ್ರತಿನಿಧಿಸಿದ್ದ ವಕೀಲರು, ಕೆಲವು ದಾಖಲೆಗಳನ್ನು ಸಲ್ಲಿಸಿದ್ದಾರೆ. ಈ ಪೈಕಿ ಜು.1ರಂದು ತನಿಖಾಧಿಕಾರಿಯು ರಿಯಾದ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಕಳುಹಿಸಿರುವ ಪತ್ರವಿದೆ. ರಾಜತಾಂತ್ರಿಕ ಮಟ್ಟದಲ್ಲಿ ಪ್ರಕರಣವನ್ನು ಪರಿಗಣಿಸಲಾಗಿದೆ ಎಂಬ ಅಂಶಗಳನ್ನು ನ್ಯಾಯಪೀಠವು ಆದೇಶದಲ್ಲಿ ದಾಖಲಿಸಿದೆ. ವಿಚಾರಣೆಯನ್ನು ಆ.8ಕ್ಕೆ ಮುಂದೂಡಿದೆ.