ಒಳಮೀಸಲಾತಿ : ನ್ಯಾ.ನಾಗಮೋಹನ ದಾಸ್ ಆಯೋಗ ರಚನೆ
Update: 2024-11-13 14:56 GMT
ಬೆಂಗಳೂರು : ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಪುಟದ ನಿರ್ಣಯದ ಮೇರೆಗೆ ಹೈಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ನೇತೃತ್ವದ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯ ಸರಕಾರ ಬುಧವಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಶಿಕ್ಷಣ ಮತ್ತು ಸರಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು ಪ್ರಾಯೋಗಿಕ ಅಂಕಿಅಂಶ ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿನೊಂದಿಗೆ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಪರಿಶಿಷ್ಟ ಜಾತಿ ಒಳಮೀಸಲಾತಿಗಳನ್ನು ಜಾರಿಗೊಳಿಸಲು ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ಆದೇಶಿಸಿತ್ತು. ಈ ನಡುವೆ ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಆಯೋಗವನ್ನು ಸ್ಥಾಪಿಸುವುದಾಗಿ ರಾಜ್ಯ ಸರಕಾರ ಪ್ರಕಟಿಸಿತ್ತು.