ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ : ಕಾರ್ಯಕ್ರಮಕ್ಕೆ ಸಿಎಂ ಚಾಲನೆ

Update: 2024-09-15 05:15 GMT

ಬೆಂಗಳೂರು : ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ದಿ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ರವಿವಾರ ವಿಧಾನ ಸೌಧದ ಮುಂಭಾಗ ಚಾಲನೆ ನೀಡಿದರು.

ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಬ್ಬ, ಪೌರ ಕಾರ್ಮಿಕ ತಾಯಂದಿರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಡ-ಬಲದಲ್ಲಿ ನಿಂತು ಪ್ರಜಾಪ್ರಭುತ್ವ ದಿನವನ್ನು ಅರ್ಥಪೂರ್ಣಗೊಳಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ, ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಸಲೀಂ ಅಹಮದ್, ಯು.ಬಿ.ವೆಂಕಟೇಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News