ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಸಂವಿಧಾನ ಪೀಠಿಕೆ ವಾಚಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದು ಕಾರ್ಯಕ್ರಮ ನಡೆಯಿತು.
ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನ ಪೀಠಿಕೆಯನ್ನು ವಾಚಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮುಖ್ಯಮಂತ್ರಿಗಳ ಸಹಿತ ಸಚಿವರೆಲ್ಲರೂ ಗಿಡಗಳಿಗೆ ನೀರುಣಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೆಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಕಾರ್ಯಕ್ರಮದಲ್ಲಿ ಮಕ್ಕಳ ಸಂವಿಧಾನ ಕ್ಲಬ್ ಯೋಜನೆಯನ್ನು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಲೋಕಾರ್ಪಣೆಗೊಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ. ಜಿ. ಪರಮೇಶ್ವರ್, ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಸಚಿವರುಗಳಾದ ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಈಶ್ವರ್ ಖಂಡ್ರೆ, ಸಹಿತ ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯರಾದ ಸುದಾಮ್ ದಾಸ್ ಸೇರಿ 10 ಕ್ಕೂ ಹೆಚ್ಚು ಶಾಸಕರು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.