ಯಾರಾದರೂ ದೂರು ಕೊಟ್ಟರೆ ʼಆಪರೇಷನ್ ಕಮಲʼ ಕುರಿತು ತನಿಖೆ: ಗೃಹ ಸಚಿವ ಪರಮೇಶ್ವರ್

Update: 2023-10-30 13:18 GMT

ಬೆಂಗಳೂರು, ಅ.30: ಬಿಜೆಪಿ ಪಕ್ಷದವರ ಆಪರೇಷನ್ ಕಮಲದ ಬಗ್ಗೆ ಯಾರಾದರೂ ದೂರು ಕೊಟ್ಟರೆ ಸೂಕ್ತ ರೀತಿಯಲ್ಲಿ ತನಿಖೆ ಮಾಡುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಪರೇಷನ್ ಕಮಲದ ಕುರಿತು ಯಾರಾದರೂ ದೂರು ಕೊಟ್ಟರೆ ತನಿಖೆ ಮಾಡುತ್ತೇವೆ. ಇನ್ನೂ, ದೂರಿನಲ್ಲಿಯೂ ನಿಜಾಂಶ, ದಾಖಲೆ ಇರಬೇಕು. ಯಾರೂ ಸಹ ಗಾಳಿಯಲ್ಲಿ ಗುಂಡು ಹೊಡೆಯಬಾರದು ಎಂದು ಅವರು ತಿಳಿಸಿದರು.

ಬಿಜೆಪಿಯವರು ಸರಕಾರದ ವಿರುದ್ಧ ಹೇಳಿಕೆಗಳನ್ನು ಕೊಡುವ ಬದಲು ಆಂತರಿಕ ಜಗಳ ಮೊದಲು ಸರಿ ಮಾಡಿಕೊಳ್ಳಲಿ. ಜತೆಗೆ, ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಿ ಎಂದು ಹೇಳಿದ ಅವರು, ಪಕ್ಷದಲ್ಲಿ ಕಾರ್ಯಕರ್ತರ ಅಸಮಾಧಾನ ಇಲ್ಲ. 33 ಮಂದಿ ಮಂತ್ರಿಗಳು ಇದ್ದಾರೆ. ಎಲ್ಲರೂ ಜಿಲ್ಲೆಗಳನ್ನು ಪ್ರತಿನಿಧಿಸುತ್ತಿದ್ದಾರೆ. ಪಕ್ಷಕ್ಕಾಗಿ ದುಡಿದವರು, ಹತ್ತಾರು ವರ್ಷ ಪಕ್ಷಕ್ಕೆ ಕೆಲಸ ಮಾಡಿದವರು, ಇಂತವರನ್ನು ನಿಗಮಗಳಿಗೆ ನೇಮಕ ಮಾಡುತ್ತೇವೆ. ಈಗಾಗಲೇ ಜಿಲ್ಲಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News