‘ವಿದ್ಯುತ್ ತಂತಿ ಸ್ಪರ್ಶಿಸಿ’ ವನ್ಯಜೀವಿಗಳ ಸಾವು ; ವರದಿ ಸಲ್ಲಿಸಲು ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

Update: 2024-09-01 15:57 GMT

ಬೆಂಗಳೂರು : ಐದು ವರ್ಷಗಳಲ್ಲಿ ಅಕ್ರಮ ವಿದ್ಯುತ್ ತಂತಿ ಬೇಲಿ ಸ್ಪರ್ಶಿಸಿ ಹಾಗೂ ಬೇಲಿ ಉರುಳಿಗೆ ಸಿಲುಕಿ ಎಷ್ಟು ವನ್ಯಜೀವಿಗಳು ಮೃತಪಟ್ಟಿವೆ ಎಂಬ ವಲಯವಾರು ವರದಿಯನ್ನು 10 ದಿನಗಳಲ್ಲಿ ಸಲ್ಲಿಸಬೇಕು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರವಿವಾರ ಈ ಕುರಿತು ಪ್ರಕಟನೆ ನೀಡಿರುವ ಅವರು, ವನ್ಯಜೀವಿಗಳು ಮೃತಪಟ್ಟ ಪ್ರಕರಣಗಳ ಕುರಿತು ಕೈಗೊಂಡಿರುವ ಕ್ರಮವೇನು? ಈ ಪ್ರಕ್ರಿಯೆ ಯಾವ ಹಂತದಲ್ಲಿದೆ. ಎಷ್ಟು ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ ಎಂಬ ಸಮಗ್ರ ವರದಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಅರಣ್ಯದಂಚಿನಲ್ಲಿರುವ ತೋಟಗಳಲ್ಲಿ ಅನಿಧಿಕೃತವಾಗಿ ಅಳವಡಿಸಲಾಗಿರುವ ವಿದ್ಯುತ್ ತಂತಿಬೇಲಿ ಸ್ಪರ್ಶದಿಂದ ಕಾಡಾನೆಗಳು ಸೇರಿದಂತೆ ವನ್ಯಜೀವಿಗಳು ಮೃತಪಡುತ್ತಿದ್ದು, ವನ್ಯಜೀವಿಗಳು ಸ್ವಾಭಾವಿಕ ಅಥವಾ ಅಸಹಜವಾಗಿ ಮೃತಪಟ್ಟ ಸಂದರ್ಭದಲ್ಲಿ ಕೂಡಲೇ ಮರಣೋತ್ತರ ಪರೀಕ್ಷೆ ಹಾಗೂ ಆಡಿಟ್ ಮಾಡಿ ನಿಖರ ವರದಿಯನ್ನು ಸಲ್ಲಿಸಬೇಕು ಎಂದು ಅವರು ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News