ಮೋದಿ ಓಡಾಡುವ ವಿಮಾನ ಐಷಾರಾಮಿ ಅಲ್ಲವೇ?: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

Update: 2023-12-22 11:10 GMT

ಮೈಸೂರು: ಸಚಿವ ಝಮೀರ್ ಅಹ್ಮದ್ ಖಾನ್ ಜೊತೆ ಐಷಾರಾಮಿ ವಿಮಾನದಲ್ಲಿ ಪ್ರಯಾಣ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ʼನರೇಂದ್ರ ಮೋದಿ ಯಾವ ವಿಮಾನದಲ್ಲಿ ಓಡಾಡುತ್ತಾರೆ? ಅವರ ವಿಮಾನ ಐಷಾರಾಮಿ ಅಲ್ಲವೇ? ಎಂದು ಪ್ರಶ್ನಿಸಿದರು.

ಮೈಸೂರು ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಶುಕ್ರವಾರ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರುʼ " ನರೇಂದ್ರ ಮೋದಿ ಯಾವ ವಿಮಾನದಲ್ಲಿ ಓಡಾಡುತ್ತಾರೆ? ಅವರದು ಐಷಾರಾಮಿ ವಿಮಾನ ಅಲ್ಲವೇ, ದೇಶದಲ್ಲಿ ಯಾವುದೇ ಪರಿಸ್ಥಿತಿಯಿದ್ದರೂ ಮೋದಿ ಓಡಾಡುವ ವಿಮಾನ ಎಂತಹದ್ದು? ಮೊದಲು ಅದನ್ನು ಬಿಜೆಪಿಯವರಿಗೆ ಕೇಳಿʼ ಎಂದು ತಿರುಗೇಟು ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News