ಜೈನಮುನಿ ಹತ್ಯೆ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಸಿಎಂ ಸಿದ್ದರಾಮಯ್ಯ

Update: 2023-07-19 10:53 GMT

ಬೆಂಗಳೂರು, ಜುಲೈ 19: ಬೆಳಗಾವಿಯಲ್ಲಿ ನಂದಿಪರ್ವತ ಆಶ್ರಮದ ಜೈನಮುನಿ ಕಾಮಕುಮಾರ ನಂದಿ ಮಹಾರಾಜರಹತ್ಯೆ ಪ್ರಕರಣದ ತನಿಖೆ ಸಿಐಡಿಗೆ ಹಸ್ತಾಂತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸಿಎಂ ಇಂದು (ಜುಲೈ 19) ಸದನಕ್ಕೆ ಮಾಹಿತಿ ನೀಡಿದ ಅವರು, ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯಲ್ಲಿ ಜೈನಮುನಿ ಹತ್ಯೆ ಪ್ರಕರಣ ಅತೀ ಸೂಕ್ಷ್ಮವಾಗಿರುವುದರಿಂದ ಸಿಐಡಿಗೆ ಹಸ್ತಾಂತರ ಮಾಡಲಾಗುವುದು ಎಂದು ಸ್ಪಷ್ಟಡಿಸಿದರು.

ಪ್ರಕರಣವೇನು?

ಜು.6ರ ಬೆಳಗ್ಗೆಯಿಂದ ಜೈನಮುನಿ ಮಠದಿಂದ ನಾಪತ್ತೆಯಾಗಿದ್ದರು. ಇದರಿಂದ ಭಕ್ತರು ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೇ ಭಕ್ತರು ಎಲ್ಲ ಕಡೆ ಹುಡುಕಿದರೂ ಜೈನಮುನಿ ಸಿಕ್ಕಿರಲಿಲ್ಲ. ಹೀಗಾಗಿ ಶುಕ್ರವಾರ ಚಿಕ್ಕೋಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಶುಕ್ರವಾರ ರಾತ್ರಿ ಪೊಲೀಸರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗಳು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರವಲಯದ ಬೋರ್‌ವೆಲ್‌ನಲ್ಲಿ ಜೈನ ಮುನಿಗಳ ಮೃತದೇಹ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ನಾಲ್ಕೆ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿತ್ತು. ಸ್ವಾಮೀಜಿಗೆ ಆಪ್ತನಾಗಿದ್ದ ನಾರಾಯಣ ಮಾಳಿ, ಹಸನ್ ಅಲಿಯಾಸ್ ಹುಸೇನ್ ದಲಾಯತ್‌ ಸೇರಿ ಜೈನಮುನಿಗಳ ಹತ್ಯೆ ಮಾಡಿದ್ದು ಬಯಲಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News