ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶಕ್ಕಿದ್ದ ನಿರ್ಬಂಧ ತೆರವು

Update: 2024-09-30 08:33 GMT

ಹೊಸದಿಲ್ಲಿ : ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಅವರಿಗೆ ಸುಪ್ರೀಂಕೋರ್ಟ್​ ಬಿಗ್ ರಿಲೀಫ್ ನೀಡಿದ್ದು, ಜನಾರ್ದನ ರೆಡ್ಡಿ ಬಳ್ಳಾರಿ ಭೇಟಿಗೆ ಇದ್ದ ನಿಷೇಧ ಅಂತ್ಯವಾಗಿದೆ.

ಬಳ್ಳಾರಿಗೆ ತೆರಳಲು ಜನಾರ್ದನ ರೆಡ್ಡಿಗೆ ಸುಪ್ರೀಂಕೋರ್ಟ್ ಅನುಮತಿ ನೀಡಿ ಸೋಮವಾರ ಆದೇಶಿಸಿದೆ. ನ್ಯಾ.ಎಂ.ಎಂ. ಸುಂದರೇಶ್ ನೇತೃತ್ವದ ದ್ವಿಸದಸ್ಯ ಪೀಠ ಈ ಆದೇಶ ನೀಡಿದೆ.

ಈ ಹಿಂದೆ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಯವರು ಜೈಲುಪಾಲಾಗಿದ್ದರು. ಬಳಿಕ 2015ರ ಜನವರಿ 23ರಂದು ಸುಪ್ರೀಂ ಕೋರ್ಟ್‌ ಜನಾರ್ದನ ರೆಡ್ಡಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಆ ಸಂದರ್ಭದಲ್ಲಿ ಬಳ್ಳಾರಿ, ಕಡಪ, ಅನಂತಪುರಕ್ಕೆ ತೆರಳಲು ಪೂರ್ವಾನುಮತಿ ಪಡೆಯವುದನ್ನು ಸರ್ವೂಚ್ಚ ನ್ಯಾಯಾಲಯ ಕಡ್ಡಾಯಗೊಳಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News