ಜನಿವಾರ ವಿವಾದ : ಮರು ಪರೀಕ್ಷೆ ಕೋರಿ ಹೈಕೋರ್ಟ್ ಮೊರೆ ಹೋದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ
Update: 2025-04-26 15:14 IST
ಬೆಂಗಳೂರು : ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರ ಪರ ವಕೀಲರು, ಮರು ಸಿಇಟಿ ಪರೀಕ್ಷೆ ಮಾಡಲು ಮನವಿ ಮಾಡಿದರು. ವಾದ ಆಲಿಸಿದ ವಿಭಾಗೀಯ ಪೀಠ, ಜೂನ್ 9ಕ್ಕೆ ವಿಚಾರಣೆ ನಿಗದಿಪಡಿಸಿದೆ.
ವೃತ್ತಿಪರ ಕೋರ್ಸ್‌ಗಳಿಗಾಗಿ ಎ.16ರಂದು ರಾಜ್ಯದಲ್ಲಿ ಸಿಇಟಿ ಪರೀಕ್ಷೆ ನಡೆದಿತ್ತು. ಈ ವೇಳೆ ಶಿವಮೊಗ್ಗದಲ್ಲಿ ಇಬ್ಬರು ವಿದ್ಯಾರ್ಥಿಗಳ ಜನಿವಾರ ತೆಗೆಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗಿತ್ತು. ಬೀದರ್‌ನಲ್ಲಿ ಜನಿವಾರ ತೆಗೆಯುವುದಿಲ್ಲ ಎಂದಿದ್ದಕ್ಕೆ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿರಲಿಲ್ಲ. ಈ ಎರಡೂ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈಗ ವಿವಾದ ಹೈಕೋರ್ಟ್ ಮೆಟ್ಟಿಲೇರಿದೆ.