ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ಮರುನೇಮಕ

Update: 2023-11-24 16:53 GMT

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಮರುನೇಮಕ ಮಾಡಲು ರಾಜ್ಯ ಸರಕಾರ ತೀರ್ಮಾನಿಸಿದೆ.

ಇನ್ನು ಎರಡು ತಿಂಗಳ ಅವಧಿಗೆ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರನ್ನೇ ಮರುನೇಮಕ ಮಾಡಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಜಯಪ್ರಕಾಶ್ ಹೆಗ್ಡೆ ಅವರ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಹಾಗೂ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆಗೆ ಅವಕಾಶವಿಲ್ಲದ ಕಾರಣ ಹಾಲಿ ಅಧ್ಯಕ್ಷರನ್ನೇ 2024ರ ಜ.31ರ ವರೆಗೆ ಮರು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.

ಶಿವಮೊಗ್ಗ ಜಿಲ್ಲೆಯ ಕಲ್ಯಾಣಕುಮಾರ್ ಎಚ್.ಎಸ್., ಬೆಂಗಳೂರಿನ ವಕೀಲ ಬಿ.ಎಸ್.ರಾಜಶೇಖರ್, ಉಡುಪಿಯ ಅರುಣ್‍ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕೆ.ಟಿ.ಸುವರ್ಣ, ಬೆಂಗಳೂರಿನ ಶಾರದಾ ನಾಯ್ಕ್ ಅವರುಗಳನ್ನು ಸದಸ್ಯರನ್ನಾಗಿ ನೇಮಿಸಿ ಆದೇಶದಲ್ಲಿ ತಿಳಿಸಲಾಗಿದೆ.  

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News