ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ, ಸಿಪಿಐ(ಎಂ) ನಾಯಕ ಜಿ.ಸಿ.ಬಯ್ಯಾರೆಡ್ಡಿ ನಿಧನ
ಬೆಂಗಳೂರು : ಸಿಪಿಐ(ಎಂ) ನಾಯಕ, ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ. ಬಯ್ಯಾರೆಡ್ಡಿ ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಯ್ಯಾರೆಡ್ಡಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬಯ್ಯಾರೆಡ್ಡಿ ಅವರ ಪಾರ್ಥೀವ ಶರೀರವನ್ನು ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಸಿಪಿಐ(ಎಂ) ರಾಜ್ಯ ಕಚೇರಿ ಇಎಂಎಸ್ ಭವನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.
ಬಯ್ಯಾರೆಡ್ಡಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪವನ್ನು ಸೂಚಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದಿಂದ ದು:ಖಿತನಾಗಿದ್ದೇನೆ. ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ನನ್ನನ್ನು ಭೇಟಿಯಾದಾಗ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಓರ್ವ ದಣಿವರಿಯದ ಜನಪರ ಹೋರಾಟಗಾರ. ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಸಿಎಂ ಸಂತಾಪ :
ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದು:ಖಿತನಾಗಿದ್ದೇನೆ. ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಒಬ್ಬ ದಣಿವರಿಯದೆ ಇದ್ದ ಜನಪರ ಹೋರಾಟಗಾರ. ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಸಿದ್ದರಾಮಯ್ಯ, ಮುಖ್ಯಮಂತ್ರಿ