ಸೆ. 10 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್‌ ಸಮಾವೇಶ: ಚ್.ಡಿ.ದೇವೇಗೌಡ

Update: 2023-08-28 17:35 GMT

ಬೆಂಗಳೂರು, ಆ. 28: ʼʼಸೆಪ್ಟೆಂಬರ್ 10ರಂದು ನಗರದ ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಗಿದೆ. ಸುಮಾರು 20 ಸಾವಿರ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆʼʼ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಸೋಮವಾರ ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,  ʼಅದಕ್ಕಾಗಿ ಎಲ್ಲ ಜಿಲ್ಲೆಗಳಿಂದ ಕಾರ್ಯಕರ್ತರು ಬರಬೇಕು ಎಂದ ಅವರು, 91 ರ ವಯಸ್ಸಿನಲ್ಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ನನ್ನನ್ನು ಕೈಬಿಡಬೇಡಿʼ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

‘ನಮ್ಮ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗುವುದಿಲ್ಲ. ಇದೆಲ್ಲಾ ಬರೀ ಊಹಾಪೋಹ ಅಷ್ಟೇ. ಯಾರು ಪಕ್ಷ ಬಿಟ್ಟು ಹೋಗುತ್ತಾರೆ ಎನ್ನುವುದು ಗೊತ್ತಾದರೆ ನಾವು ಸರಿ ಮಾಡಿಕೊಳ್ಳುತ್ತೇವೆ. ಈ ರೀತಿಯ ಊಹಾಪೆಪೋಹದ ಸುದ್ದಿ ಮಾಡಬೇಡಿ. ಈ ಪ್ರಾದೇಶಿಕ ಪಕ್ಷ ಉಳಿಯಲು ಬಿಡಿ ಎಂದರು.

ನಾನು ಮನೆಯಲ್ಲಿ ಕುಳಿತು ಎಲ್ಲವನ್ನೂ ನೋಡುತ್ತಿದ್ದೇನೆ. ಕುಮಾರಸ್ವಾಮಿ ಅವರ ಪೆನ್‍ಡ್ರೈವ್‍ಕುರಿತ ವಿವಾದವೂ ವಿವಾದನೋಡಿದ್ದೇನೆ. ಕುಮಾರಸ್ವಾಮಿ ಅಷ್ಟೊಂದುಸುಲಭವಾಗಿ ಮಾತನಾಡುವುದಿಲ್ಲ. ತುಂಬಾ ವಿಷಯಗಳಿದ್ದು,ಪೆನ್‍ಡ್ರೈವ್‍ಬಗ್ಗೆಲಘುವಾಗಿ ಮಾತನಾಡುವುದುಬೇಡ. ಮುಂದಿನದಿನಗಳಲ್ಲಿ ಈ ಬಗ್ಗೆಮಾತನಾಡುತ್ತೇನೆಎಂದು ಅವರು ಹೇಳಿದರು.

ದೇಶದಲ್ಲಿ ಪ್ರಾದೇಶಿಕ ಪಕ್ಷವನ್ನು ತುಳಿಯುತ್ತಿದ್ದಾರೆ. ನಾನು ತುಂಬ ವಿಚಾರ ಮಾತನಾಡಬಲ್ಲೆ. ಆದರೆ ಇಂದು ಪಕ್ಷದ ಸಂಘಟನೆಯಷ್ಟೇ ಮಾತನಾಡುತ್ತೇನೆ. ಕುಮಾರಸ್ವಾಮಿಎಲ್ಲ ಕಡೆ ಓಡಾಡಬೇಕಾಗುತ್ತದೆ. ಅವರ ನಾಯಕತ್ವದಲ್ಲೇ ಪಕ್ಷ ಮುನ್ನಡೆಯಲಿದೆ. ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಕೋರ್ ಕಮಿಟಿ ಸದಸ್ಯರ ವಿಶ್ವಾಸಕ್ಕೆ ಪಡೆದು ಒಂದು ತೀರ್ಮಾನಿಸಲಾಗುವುದು ಎಂದು ಅವರು ತಿಳಿಸಿದರು.

ಬೆಂಗಳೂರಿನಲ್ಲಿ ಸರಕಾರಿ ಜಾಗ ಅತಿಕ್ರಮಣ ಸೇರಿದಂತೆ ನನ್ನ ಬಳಿ ತುಂಬಾ ವಿಷಯ ಇದೆ. ಇದು ಒಂದು ಘಟನೆ ಅಷ್ಟೇ. ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಯಾರೋ ಹೇಗೆ, ಅವರ ಮಾತಿನ ವೈಖರಿ, ಪ್ರತಿಯೊಂದನ್ನು ಗಮನಿಸುತ್ತೇನೆ ಎಂದು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ಅವರಿಗೆ ತಿರುಗೇಟು ನೀಡಿದರು.

ಸಮಾವೇಶ:

ಸೆಪ್ಟೆಂಬರ್ 10ರಂದು ನಗರದ ಅರಮನೆ ಮೈದಾನದಲ್ಲಿ ಕಾರ್ಯಕರ್ತರ ಸಮಾವೇಶ ಏರ್ಪಡಿಸಲಾಗಿದೆ. ಸುಮಾರು 20 ಸಾವಿರ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ. ಅದಕ್ಕಾಗಿ ಎಲ್ಲ ಜಿಲ್ಲೆಗಳಿಂದ ಕಾರ್ಯಕರ್ತರು ಬರಬೇಕು ಎಂದ ಅವರು, 91 ರ ವಯಸ್ಸಿನಲ್ಲೂ ಕೆಲಸ ಮಾಡುತ್ತಿದ್ದೇನೆ. ಯಾರೂ ನನ್ನನ್ನು ಕೈಬಿಡಬೇಡಿ ಎಂದು ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದರು.

ಕೆಲವಡೆ ನಾಯಕರ ಬದಲಾವಣೆ: ‘ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ಜೆಡಿಎಸ್ ಉಳಿಸಲು ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ನವು ಹಿರಿಯ ನಾಯಕ ಜಿ.ಟಿ.ದೇವೇಗೌಡ ಅವರ ನೇತೃತ್ವದಲ್ಲಿ ಕೋರ್ ಕಮಿಟಿ ಮಾಡಿದ್ದೇವೆ. ಎಲ್ಲ ಜಿಲ್ಲೆಗಳಿಗೆ ಕಮಿಟಿ ಭೇಟಿ ಕೊಟ್ಟು ವರದಿ ನೀಡುತ್ತದೆ.ಆನಂತರ ಎಲ್ಲೆಲ್ಲಿ ನಾಯಕರ ಬದಲಾವಣೆ ಆಗಬೇಕಿದೆ. ಅದನ್ನು ಜಾರಿ ಮಾಡುತ್ತೇವೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹೀಂ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News