ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಹೊಸ ಕೋರ್ ಕಮಿಟಿ ರಚಿಸಿದ ಜೆಡಿಎಸ್

Update: 2023-08-18 18:36 GMT

ಜಿ.ಟಿ.ದೇವೇಗೌಡ ಅವರನ್ನು ಅಭಿನಂದಿಸುತ್ತಿರುವ ನಾಯಕರು

ಬೆಂಗಳೂರು: ಮುಂಬಹರುವ ಲೋಕಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ  ಜೆಡಿಎಸ್, ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ 21 ಸದಸ್ಯರ ನೂತನ ಕೋರ್ ಕಮಿಟಿ ರಚಿಸಿದೆ.

ʼʼ21 ಸದಸ್ಯರ ಕೋರ್ ಕಮಿಟಿಯಲ್ಲಿ ಮಾಜಿ ಸಚಿವರಾದ ಸಾ.ರಾ.ಮಹೇಶ್, ಬಂಡೆಪ್ಪ ಖಾಶೆಂಪೂರ್, ಎಚ್.ಕೆ.ಕುಮಾರಸ್ವಾಮಿ, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಆಲ್ಕೋಡ್ ಹನುಮಂತಪ್ಪ ಸೇರಿದಂತೆ ಹಲವು ಶಾಸಕರು, ಎಂಎಲ್ಸಿಗಳು ಹಾಗೂ ಪಕ್ಷದ ಮುಖಂಡರು ಇದ್ದು, ಅವರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆʼʼ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜೆಪಿ ಭವನದಲ್ಲಿ ಮಾಧ್ಯಮಗಳಿಗೆ ತಿಳಿಸಿದರು. 

ʼಜಿ.ಟಿ.ದೇವೇಗೌಡ ನೇತೃತ್ವದಲ್ಲಿ ಪಕ್ಷದ ನಾಯಕರು ಆಗಸ್ಟ್ 20 ರಿಂದ ಸೆಪ್ಟೆಂಬರ್ 30 ರವರೆಗೆ ರಾಜ್ಯ ಪ್ರವಾಸ ಮಾಡಲಿದ್ದಾರೆʼ ಎಂದು ಅವರು ಇದೇ ವೇಳೆ ತಿಳಿಸಿದರು. 

ʼʼಕನ್ನಡಿಗರು ಕೊಟ್ಟ ಪೆನ್ ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರಕಾರʼʼ

‘ಜನರಿಗೆ ದುಂಬಾಲು ಬಿದ್ದು ಪೆನ್ ಕೊಡಿ, ಪೆನ್ ಕೊಡಿ ಎಂದು ಕೇಳಿದರು. ಪಾಪ. ಜನರೂ ನಂಬಿ ಪೆನ್ ಕೊಟ್ಟರು. ಈಗ ಆ ಪೆನ್ ಅನ್ನು ತೆಗೆದುಕೊಂಡು ಹೋಗಿ ತಮಿಳುನಾಡಿಗೆ ಒತ್ತೆ ಇಟ್ಟಿದ್ದಾರೆ. ರೆಡ್ ಕಾರ್ಪೆಟ್ ಹಾಕಿ ಆ ರಾಜ್ಯದ ಸಿಎಂ ಸ್ಟಾಲಿನ್‍ರಿಗೆ ಸ್ವಾಗತ ಕೊರುತ್ತಿದ್ದಾರೆ’

ಎಚ್.ಡಿ.ಕುಮಾರಸ್ವಾಮಿ- ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News