ಬಿಜೆಪಿ ನಾಯಕರು ತಮ್ಮ ಹೋರಾಟ ‘ಕೇಂದ್ರ ಸರಕಾರದ ವಿರುದ್ಧ’ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿ.ಕೆ. ಶಿವಕುಮಾರ್ ಲೇವಡಿ

Update: 2025-04-12 18:15 IST
ಬಿಜೆಪಿ ನಾಯಕರು ತಮ್ಮ ಹೋರಾಟ ‘ಕೇಂದ್ರ ಸರಕಾರದ ವಿರುದ್ಧ’ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿ.ಕೆ. ಶಿವಕುಮಾರ್ ಲೇವಡಿ

ಡಿ.ಕೆ. ಶಿವಕುಮಾರ್ (Photo: X/@DKShivakumar)

  • whatsapp icon

ಬೆಂಗಳೂರು: ‘ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಎ.17ಕ್ಕೆ ಕಾಂಗ್ರೆಸ್ ಪಕ್ಷದಿಂದ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್‍ನಲ್ಲಿ ‘ಕೇಂದ್ರ ಬಿಜೆಪಿ ಸರಕಾರದ ವಿರುದ್ಧ' ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಮೋದಿ ಸರಕಾರ ಅಧಿಕಾರಕ್ಕೆ ಬಂದಾಗ ಎಲ್ಲ ವಸ್ತುಗಳ ಬೆಲೆ ಏನಿತ್ತು, ಈಗ ಏನಾಗಿದೆ ಎಂದು ನೋಡಬೇಕು. ಈ ಬೆಲೆ ಏರಿಕೆ ಬಿಸಿ ತಡೆಯಲು ನಮ್ಮ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಕೇಂದ್ರದ ಬೆಲೆ ಏರಿಕೆ ವಿರುದ್ಧ ರಾಜ್ಯಮಟ್ಟದಲ್ಲಿ ಹೋರಾಟ ಮಾಡಲು ಚರ್ಚೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಹೋರಾಟವನ್ನು ಜಿಲ್ಲಾ ಮಟ್ಟದಲ್ಲಿ ಮಾಡಲಾಗುವುದು ಎಂದರು.

ಅಸ್ತಿತ್ವಕ್ಕಾಗಿ ಜೆಡಿಎಸ್ ಹೋರಾಟ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಹೋರಾಟ ಮಾಡಬಾರದು ಎಂದು ಹೇಳಲು ಸಾಧ್ಯವಿಲ್ಲ. ಜೆಡಿಎಸ್ ಪಕ್ಷದವರು ‘ಸಾಕಪ್ಪಾ ಸಾಕು ಬಿಜೆಪಿ ಸರಕಾರ' ಎಂದು ಹೋರಾಟ ಮಾಡಲು ಸಲಹೆ ನೀಡುತ್ತೇನೆ. ಅವರು ಸಿದ್ಧಾಂತವನ್ನು ಬಳಸಿಕೊಂಡಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.

ಅಗತ್ಯ ಸಹಕಾರ: ನಮಗೆ ಯಾರು ಬಂದು ಅರ್ಜಿ ನೀಡಿದ್ದಾರೋ ಅವರಿಗೆ ನೆರವು ನೀಡಲಿದ್ದೇವೆ. ಇದಕ್ಕೆ ಬಜೆಟ್‍ನಲ್ಲೂ ಅನುದಾನ ಮೀಸಲಿಡಲಾಗಿದೆ. ಅವರು 2-3 ಭಾಗಗಳಾಗಿರಬೇಕು. ಎಲ್ಲರೂ ಒಗ್ಗಟ್ಟಾಗಿ ಬಂದರೆ, ಕರಗ ಉತ್ಸವಕ್ಕೆ ಮೊದಲಿನಿಂದಲೂ ಯಾವ ರೀತಿ ನೆರವು ನೀಡುತ್ತಿದ್ದೆವೋ ಅದನ್ನೇ ನೀಡುತ್ತೇವೆ. ನಾವು ಅನುದಾನ ನೀಡದಿದ್ದರೆ ನಮಗೆ ಆಹ್ವಾನ ಯಾಕೆ ನೀಡಿದ್ದಾರೆ? ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಸಮೀಕ್ಷಾ ವರದಿ: ಜಾತಿ ಗಣತಿಯು ಜನಗಣತಿಯಲ್ಲ, ಅದು ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ. ನಮ್ಮ ಪಕ್ಷ ಸರ್ವರಿಗೂ ಸಮಬಾಳು, ಸಮಪಾಲು ಎಂಬ ನಿಲುವು ಹೊಂದಿದೆ. ಸಿಎಂ ಹಾಗೂ ನಾನು ಇನ್ನೂ ವರದಿ ನೋಡಿಲ್ಲ. ನಾವು ಇದನ್ನು ಪರಿಶೀಲನೆ ಮಾಡುತ್ತೇವೆ. ಏನಾದರೂ ಹೆಚ್ಚು ಕಮ್ಮಿ ಇದ್ದರೆ ಎಲ್ಲರೂ ಚರ್ಚೆ ಮಾಡಿ ಅದನ್ನು ಸರಿಪಡಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News