"ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ"; ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Update: 2025-04-12 17:24 IST
"ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ"; ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ
  • whatsapp icon

ಬೆಂಗಳೂರು: ʼಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರʼ ಎಂಬ ಘೋಷ ವಾಕ್ಯದೊಂದಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ ನಡೆಸಿತು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಸಂಸದ ಮಲ್ಲೇಶ್ ಬಾಬು ಸಹಿತ ಪಕ್ಷದ ನಾಯಕರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುರೇಶ್ ಬಾಬು, ಎಚ್.ಡಿ. ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್, ಹಿರಿಯ ಶಾಸಕ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ. ಎ ತಿಪ್ಪೇಸ್ವಾಮಿ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಅನೇಕ ಮುಖಂಡರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಬಂದಿದ್ದರು.

ವಿಧಾನಸೌಧ ಮುತ್ತಿಗೆ ಯತ್ನಿಸಿದ ನಾಯಕರು ಪೊಲೀಸ್‌ ವಶಕ್ಕೆ:

ಪ್ರತಿಭಟನಾ ಸಭೆ ಮುಕ್ತಾಯವಾದ ನಂತರ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಯಕರು, ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ಸಂದರ್ಭದಲ್ಲಿ ಪೊಲೀಸರು ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಮುಖಂಡರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

ಮುಖ್ಯಮಂತ್ರಿಯಿಂದ ಶಾಸಕರಿಗೆ ನೇರ ಆಮಿಷ; ಶಾಸಕ ಎಂ.ಟಿ. ಕೃಷ್ಣಪ್ಪ ಆರೋಪ

ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ. ಕೃಷ್ಣಪ್ಪ,  ಪ್ರತಿಪಕ್ಷ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಮಿಷ ಒಡ್ಡುತ್ತಿದ್ದಾರೆಂದು ಆರೋಪಿಸಿದರು.

ನಾನು ನನ್ನ ಕ್ಷೇತ್ರಕ್ಕೆ ಪಾಲಿಟೆಕ್ನಿಕ್ ಕಾಲೇಜು ಕೊಡಿ ಎಂದು ಕೇಳಿದರೆ ಕಾಂಗ್ರೆಸ್ ಪಕ್ಷಕ್ಕೆ ಬಾ ಎಂದು ಸಿದ್ದರಾಮಯ್ಯ ಕರೆಯುತ್ತಾರೆ. ನಾವು ಶಾಸಕರಾಗಿ ಎರಡು ವರ್ಷವಾಯಿತು. ಕ್ಷೇತ್ರಗಳ ಅಭಿವೃದ್ಧಿಗೆ ಹಣ ಕೊಟ್ಟಿಲ್ಲ. ಒಂದು ರಸ್ತೆಯ ಗುಂಡಿ ಮುಚ್ಚೋಕೆ ದುಡ್ಡು ಕೊಡುತ್ತಿಲ್ಲ. ಬರೀ ಲೂಟಿ ಬಿಟ್ಟರೆ ಬರೀ ಏನು ಮಾಡುತ್ತಿಲ್ಲ. ಇದು ದಾರಿದ್ರ್ಯ ಸರ್ಕಾರ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. 




 


Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News