ಮೈತ್ರಿ ಮಾತುಕತೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರನ್ನೇಕೆ ಕರೆದಿಲ್ಲ: ಸಚಿವ ಝಮೀರ್ ಅಹ್ಮದ್ ಪ್ರಶ್ನೆ

Update: 2023-09-22 17:15 GMT

ಬೆಂಗಳೂರು : ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷ ಕ್ಕೆ ಅನುಕೂಲ ಆಗಲಿದ್ದು, ಇದೀಗ ಜೆಡಿಎಸ್ ಬಿಜೆಪಿ ಬಿ ಟೀಮ್ ಎಂಬುದು ಸಾಬೀತಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು ಜೆಡಿಎಸ್ ಇನ್ನು ಮುಂದೆ ಜಾತ್ಯತೀತ ಪದ ತೆಗೆಯುವುದು ಸೂಕ್ತ ಎಂದು ಹೇಳಿದರು.

2019 ರಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ನಾವು ಪ್ರತ್ಯೇಕ ವಾಗಿ ಹೋಗಿದ್ದರೆ ಕನಿಷ್ಠ ಹತ್ತು ಸ್ಥಾನ ಗೆಲ್ಲುತ್ತಿದ್ದೆವು. ಜೆಡಿಎಸ್ ಜತೆ ಹೋಗಿದ್ದಕ್ಕೆ ಒನ್ ಡಿಜಿಟ್ ಗೆ ಇಳಿದೆವು. 2024 ರ ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಸ್ಥಿತಿ ಯೂ ಇದೇ ಆಗಲಿದೆ ಎಂದು ವ್ಯಂಗ್ಯ ವಾಡಿದರು.

ʼʼಸಿ.ಎಂ. ಇಬ್ರಾಹಿಂ ಅವರನ್ನೇಕೆ ಕರೆದಿಲ್ಲʼʼ

ʼಮೈತ್ರಿ ಮಾತುಕತೆ ಗೆ ರಾಜ್ಯ ಜೆಡಿಎಸ್ ಅಧ್ಯಕ್ಷ ಸಿ. ಎಂ. ಇಬ್ರಾಹಿಂ ಅವರನ್ನೇಕೆ ಕರೆದಿಲ್ಲ. ಅವರು ಮುಸ್ಲಿಮ್ ಸಮುದಾಯಕ್ಕೆ ಸೇರಿದ್ದಾರೆ ಎಂದು ಕರೆದಿಲ್ಲವೇ?ʼ ಎಂದು ಕೇಳಿದ್ದಾರೆ.

ʼಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದ್ದಕ್ಕೆ ನನ್ನ ಒಪ್ಪಿಗೆ ಇರಲಿಲ್ಲ ಎಂದು ಹೇಳಿದ್ದ ಮಾಜಿ ಪ್ರಧಾನಿ ದೇವೇಗೌಡರು ಇದೀಗ ಏನು ಹೇಳುತ್ತಾರೆ. ಮೈತ್ರಿ ಬಗ್ಗೆ ಅವರು ಮೌನ ವಹಿಸಿರುವುದು ಯಾಕೆʼ ಎಂದು ಕೇಳಿದ್ದಾರೆ.

ʼಜೆಡಿಎಸ್ -ಬಿಜೆಪಿ ಮೈತ್ರಿ ಯಿಂದ ಇದೀಗ ಕಾಂಗ್ರೆಸ್ ಪಕ್ಷ ಒಂದೇ ಜಾತ್ಯತೀತ ಎಂಬುದು ಸಾಬೀತಾಗಿದೆ. ಯಾವುದೇ ಸಿದ್ಧಾಂತ ಇಲ್ಲದ ಮೈತ್ರಿ ಎಂಬುದು ರಾಜ್ಯದ ಜನತೆಗೂ ಸ್ಪಷ್ಟತೆ ಸಿಕ್ಕಿದೆ. ಮೈತ್ರಿಯಿಂದ ಕಾಂಗ್ರೆಸ್ ಗೆ ಲಾಭ ಆಗಲಿದೆʼ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News