ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು

Update: 2024-07-16 06:47 GMT

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ‌‌‌.

ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿಗಳಾದ ಎ-5 ಅಮಿತ್ ದಿಗ್ವೇಕರ್, ಎ-17ಕೆ.ಟಿ.ನವೀನ್ ಕುಮಾರ್, ಎ - 7 ಸುರೇಶ್ ಹೆಚ್.ಎಲ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ‌ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠ ಜಾಮೀನು ನೀಡಿ ಆದೇಶ ಹೊರಡಿಸಿದೆ.

ಕಳೆದ 6 ವರ್ಷಗಳಿಂದ ಆರೋಪಿಗಳು ಜೈಲಿನಲ್ಲಿದ್ದಾರೆ.ವಿಚಾರಣೆ ಮುಗಿಯದೇ ದೀರ್ಘ ಕಾಲ‌ ಜೈಲಿನಲ್ಲಿಡುವಂತಿಲ್ಲವೆಂಬ ತೀರ್ಪಿದೆ ಎಂದು ಆರೋಪಿಗಳ ಪರ ಅರುಣ್ ಶ್ಯಾಮ್, ಮಧುಕರ್ ದೇಶಪಾಂಡೆ, ಬಸವರಾಜ ಸಪ್ಪಣ್ಣವರ್ ವಾದ ಮಂಡಿಸಿದ್ದರು. ವಾದ ಪ್ರತಿವಾದ ಆಲಿಸಿ ಷರತ್ತುಬದ್ದ ಜಾಮೀನು ನೀಡಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶಿದೆ. ಈ ಹಿಂದೆ ಎ -11 ಮೋಹನ್ ನಾಯಕ್ ಗೆ ಮಾತ್ರ ಜಾಮೀನು ಮಂಜೂರಾಗಿತ್ತು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News