ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಪ್ರಮಾಣ ವಚನ ಸ್ವೀಕಾರ

Update: 2024-07-06 17:16 IST
ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಪ್ರಮಾಣ ವಚನ ಸ್ವೀಕಾರ
  • whatsapp icon

ಬೆಂಗಳೂರು : ರಾಜ್ಯ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಶನಿವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

ರಾಜಭವನದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು  ಉಪ ಲೋಕಾಯುಕ್ತರಿಗೆ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.

ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರಾಜ್ಯ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ಎಸ್ ಪಾಟೀಲ್, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು, ವಕೀಲರು, ಗಣ್ಯರು, ಶಾಸಕರು, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News