ಕೋವಿಡ್ ಹಗರಣ | ಸಿಎಂಗೆ ಮಧ್ಯಂತರ ವರದಿ ಸಲ್ಲಿಸಿದ ನ್ಯಾ.ಜಾನ್ ಮೈಕೇಲ್ ಡಿ ಕುನ್ಹಾ
Update: 2025-04-05 19:49 IST
ಬೆಂಗಳೂರು : ಕೋವಿಡ್ ಸಂದರ್ಭದ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ಹಗರಣಗಳ ತನಿಖೆಗೆ ನೇಮಿಸಲಾಗಿದ್ದ ತನಿಖಾ ಆಯೋಗದ ಮುಖ್ಯಸ್ಥರಾದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೇಲ್ ಡಿ ಕುನ್ಹಾ ಅವರು 1808 ಪುಟಗಳ ಎರಡನೇ ಮಧ್ಯಂತರ ವರದಿಯನ್ನು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ಒಟ್ಟು ಏಳು ಸಂಪುಟಗಳ ಮಧ್ಯಂತರ ವರದಿ ಇದಾಗಿದ್ದು, ಇದರಲ್ಲಿ ನಾಲ್ಕು ಸಂಪುಟಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಹಗರಣ ಮತ್ತು ಅವ್ಯವಹಾರಗಳದ್ದಾಗಿವೆ ಎಂದು ತಿಳಿದು ಬಂದಿದೆ. ಉಳಿದ ಮೂರು ಸಂಪುಟಗಳು ಬೆಂಗಳೂರು ನಗರ ಜಿಲ್ಲೆ, ಗ್ರಾಮಾಂತರ ಜಿಲ್ಲೆ ಮತ್ತು ಗದಗ ಹಾಗೂ ಕೊಪ್ಪಳ ಜಿಲ್ಲೆಗಳ ಸಂಬಂಧಿಸಿದೆ ಎಂದು ಗೊತ್ತಾಗಿದೆ.
ಈ ಸಂದರ್ಭದಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಉಪಸ್ಥಿತರಿದ್ದರು.