ಕೆ-ಸೆಟ್ : ತಾತ್ಕಾಲಿಕ ಅಂಕ ಪ್ರಕಟ

Update: 2024-05-02 14:14 GMT

ಬೆಂಗಳೂರು : ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆಸೆಟ್-2023ನಲ್ಲಿ ಅಭ್ಯರ್ಥಿಗಳು ಗಳಿಸಿದ ವಿಷಯವಾರು ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ತನ್ನ ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ.

ಪತ್ರಿಕೆ-1 ಮತ್ತು ಪತ್ರಿಕೆ-2ರ ಎಲ್ಲ 41 ವಿಷಯಗಳ ವಿಷಯವಾರು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಮೇ 10ರೊಳಗೆ ಇ-ಮೇಲ್ ಮಾಡಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜನವರಿ 13ರಂದು ಪ್ರಾಧಿಕಾರ ಪರೀಕ್ಷೆ ನಡೆಸಿ, ಎ.4ರಂದು ಅಂತಿಮ ಕೀ ಉತ್ತರಗಳನ್ನು ಬಿಡುಗಡೆ ಮಾಡಿತ್ತು. ಈ ತಾತ್ಕಾಲಿಕ ಅಂಕಪಟ್ಟಿಯ ಆಧಾರದ ಮೇಲೆ ಅಭ್ಯರ್ಥಿಯು ಕೆಸೆಟ್‍ನಲ್ಲಿ ಅರ್ಹತೆ ಪಡೆದಿದ್ದಾರೆಂದು ಭಾವಿಸುವಂತಿಲ್ಲ. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News