ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ಮೃತ್ಯು
Update: 2023-08-28 14:46 GMT
ಕಡೂರು, ಆ.28: ಕೆರೆಯಲ್ಲಿ ಈಜಲು ಹೋದ ಬಾಲಕ ಈಜು ಬಾರದೇ ಮೃತಪಟ್ಟಿರುವ ಘಟನೆ ತಾಲೂಕಿನ ಹರುವನಹಳ್ಳಿ ಗ್ರಾಮದಲ್ಲಿ ಸೋಮವಾರ ವರದಿಯಾಗಿದೆ.
ಮೃತ ಬಾಲಕನನ್ನು ಕಡೂರು ಪಟ್ಟಣದ ಕಲ್ಗುಂಡಿ ಬಡಾವಣೆ ನಿವಾಸಿ ಪಾರ್ಥಸಾರತಿ(15) ಎಂದು ಗುರುತಿಸಲಾಗಿದ್ದು, ಈತ ಕಳೆದ ರವಿವಾರ ಮಧ್ಯಾಹ್ನ ಆಟವಾಡಿಕೊಂಡು ಬರುತ್ತೇನೆ ಎಂದು ಮನೆಯವರ ಬಳಿ ಹೇಳಿ ಹೋದವನು ಸಂಜೆಯಾದರೂ ಮನೆಗೆ ಹಿಂದಿರುಗಿಲ್ಲ. ಅನುಮಾನಗೊಂಡ ಬಾಲಕನ ಪೋಷಕರು ಎಲ್ಲೆಡೆ ಹುಡುಕಾಡಿದರೂ ಬಾಲಕನ ಸುಳಿವು ಸಿಕ್ಕಿಲ್ಲ.
ಸೋಮವಾರ ಬೆಳಗ್ಗೆ ಕಡೂರು ಪಟ್ಟಣ ಸಮೀಪದಲ್ಲಿ ಬಾಲಕರ ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಹರುವನಹಳ್ಳಿ ಗ್ರಾಮದಲ್ಲಿರುವ ಕೆರೆಯಲ್ಲಿ ಬಾಲಕನ ಮೃತ ದೇಹ ಪತ್ತೆಯಾಗಿದೆ. ಈಜಲು ಕೆರೆಗೆ ಇಳಿದಿದ್ದ ವೇಳೆ ಈಜಲು ಬಾರದೇ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆಂದು ಹೇಳಲಾಗುತಿ. ಘಟನೆ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.