ಕಲಬುರಗಿ | ಲಾರಿ–ಬೈಕ್ ಢಿಕ್ಕಿ: ಮಗು ಸೇರಿ ಒಂದೇ ಕುಟುಂಬದ ಐವರು ಮೃತ್ಯು

Update: 2023-11-02 16:36 GMT

ಅಪಘಾತಕ್ಕೀಡಾದ ಲಾರಿ

ಕಲಬುರಗಿ: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂದಬದ ಐವರು ಮೃತಪಟ್ಟಿರುವ ಘಟನೆ ಅಫಜಲಪುರ ಪೊಲೀಸ್ ಠಾಣೆಯ ಬಳ್ಳೂರಗಿ ಗ್ರಾಮದ ರಾಷ್ಟೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ವರದಿಯಾಗಿದೆ.

ಲಾರಿ ಮತ್ತು  ಬೈಕ್ ಮುಖಾಮುಖಿ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮೃತರನ್ನು ರೋಷನ್ ನೇವಾರ್(28), ಅಸ್ಮಿತಾ ರೋಶನ್ (23), ಸ್ವಸ್ತಿಕಾ ಕೃಷ್ಣ(20), ಮಿಲನ (5), ಲಖನ್ (2) ಎಂದು ಗುರುತಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ‌ ಪರೀಕ್ಷೆಗೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರೆಲ್ಲರೂ ನೇಪಾಳ ಮೂಲದವರು ಎಂದು ತಿಳಿದು ಬಂದಿದೆ.

ದಂಪತಿ, ಇಬ್ಬರು ಮಕ್ಕಳು ಮತ್ತು ಒಬ್ಬ ಮಹಿಳೆ ಸೇರಿ ಐವರು ಒಂದೇ ಬೈಕ್ ನಲ್ಲಿ ಮಹಾರಾಷ್ಟ್ರದ ದುಧನಿ ಕಡೆಯಿಂದ ಅಫಜಲಪುರದತ್ತ ಹೊರಟಿದ್ದರು ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News