ಮುಸ್ಲಿಂ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಲ್ಲಡ್ಕ ಪ್ರಭಾಕರ್ ಭಟ್‌ ಗೆ ಮಧ್ಯಂತರ ಜಾಮೀನು ಮಂಜೂರು

Update: 2023-12-28 13:34 GMT

ಬೆಂಗಳೂರು: ಗುರುವಾರ ಸಂಜೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿರುವುದನ್ನು ಹಿರಿಯ ವಕೀಲ ಮತ್ತು ಕರ್ನಾಟಕದ ಮಾಜಿ ಅಡ್ವೋಕೇಟ್ ಜನರಲ್ ಅರುಣಾ ಶ್ಯಾಮ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಖಚಿತಪಡಿಸಿದ್ದಾರೆ.

ಡಿಸೆಂಬರ್ 24 ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹನುಮ ಜಯಂತಿ ಅಂಗವಾಗಿ ನಡೆದ 'ಸಂಕೀರ್ತನಾ ಯಾತ್ರೆ'ಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪ ಕಲ್ಲಡ್ಕ ಪ್ರಭಾಕರ್ ಭಟ್ ಮೇಲಿದೆ.

'ಸಂಕೀರ್ತನಾ ಯಾತ್ರೆ'ಯಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್ , "ಹಿಂದೆ ತಲಾಕ್ ತಲಾಕ್ ಎಂದು ಹೇಳಿ ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗ್ತಿದ್ದ. ನಿಮಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ. ತಲಾಕ್ ರದ್ದು ಮಾಡಿ ನಿಮಗೆ ಗೌರವ ಕೊಟ್ಟಿದ್ದು ಇದೇ ಹಿಂದೂ ಧರ್ಮ" ಎಂದು ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಬಗ್ಗೆ ರಾಜ್ಯಾದ್ಯಂತ ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.‌

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News