ಸರಕಾರದ ನಾಮಫಲಕಗಳನ್ನು ಕಡ್ಡಾಯವಾಗಿ ‘ಕನ್ನಡ’ದಲ್ಲೇ ಪ್ರದರ್ಶಿಸುವಂತೆ ಆದೇಶ

Update: 2024-10-06 16:02 GMT

ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲದರಲ್ಲೂ ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ರಾಜ್ಯ ಸರ್ಕಾರದ ಆದೇಶ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ಉನ್ನತ ಶಿಕ್ಷಣ ಇಲಾಖೆ ಕಛೇರಿ, ಸಂಸ್ಥೆ, ವಿಶ್ವವಿದ್ಯಾಲಯಗಳಲ್ಲಿ ಪ್ರಾಧಿಕಾರಗಳ ಸೇವಾ ಆವರಣದ ಹೆಸರು, ಪದನಾಮ, ಸೂಚನಾ ಫಲಕಗಳು, ಇತರ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಪ್ರದರ್ಶಿಸಬೇಕು ಎಂದು ಅವಧಿ.

ತೀರಾ ಅನಿವಾರ್ಯವಿದ್ದಲ್ಲಿ ಮಾತ್ರ ಕಡ್ಡಾಯವಾಗಿ ಕನ್ನಡ ಭಾಷೆಯು ಶೇ.60ರಷ್ಟು ನಾಮಫಲಕದ ಮೇಲ್ಬಾಗದಲ್ಲಿರುವಂತೆ ಹಾಗೂ ಕೆಳಭಾಗದಲ್ಲಿ ಶೇ.40ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಕಾಲೇಜು ಶಿಕ್ಷಣ ನಿರ್ದೇಶಕರು, ಎಲ್ಲ ವಲಯದ ಜಂಟಿ ನಿರ್ದೇಶಕರು, ಪ್ರಥಮ ದರ್ಜೆ ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News